ದೇಶದ ಟೆಲಿಕಾಂ ವಲಯದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ಖಾಸಗಿ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುವಂತಹ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆದಿದೆ. ಕೆಲವೊಂದು ಯೋಜನೆಗಳಲ್ಲಿ ಹೆಚ್ಚುವರಿ ಪ್ರಯೋಜನ ಲಭ್ಯ ಮಾಡಿದೆ. ಇದೀಗ ಮತ್ತೆರಡು ನೂತನ ಯೋಜನೆಗಳನ್ನು ಪರಿಚಯಿದ್ದು, ಖಾಸಗಿ ಟೆಲಿಕಾಂಗಳನ್ನು ದಂಗುಬಡಿಸಿದೆ.
ಬಿಎಸ್‌ಎನ್‌ಎಲ್ ಟೆಲಿಕಾಂನ ಹೊಸ ಯೋಜನೆಗಳು ಆಕರ್ಷಕ ಪ್ರಯೋಜನ ಪಡೆದಿವೆ.
ಹೌದು, ಬಿಎಸ್‌ಎನ್‌ಎಲ್ ಸಂಸ್ಥೆಯು ಹೊಸದಾಗಿ ಎರಡು ಪ್ರಿಪೇಯ್ಡ್ ಯೋಜನೆಗಳನ್ನು ಯೋಜನೆಗಳನ್ನು ಲಾಂಚ್ ಮಾಡಿದೆ. ಅವುಗಳು ಕ್ರಮವಾಗಿ 2999ರೂ. ಮತ್ತು 299ರೂ. ಬೆಲೆಯನ್ನು ಹೊಂದಿವೆ. ಈ ಎರಡೂ ಪ್ರಿಪೇಯ್ಡ್ ಯೋಜನೆಗಳು ದೇಶಾದ್ಯಂತ ಟೆಲಿಕಾಂನ ಗ್ರಾಹಕರಿಗೆ ಲಭ್ಯವಾಗಲಿದೆ. ಇನ್ನು ಈ ಎರಡೂ ಯೋಜನೆಗಳು ಫೆಬ್ರವರಿ 1, 2022 ರಿಂದ ಜಾರಿಗೆ ಬರಲಿವೆ ಎನ್ನಲಾಗಿದೆ. ಹಾಗಾದರೇ ಬಿಎಸ್‌ಎನ್‌ಎಲ್ ಸಂಸ್ಥೆಯ 2999ರೂ. ಮತ್ತು 299ರೂ ಯೋನೆಗಳ ಪ್ರಯೋಜನಗಳ ಬಗ್ಗೆ ಹಾಗೂ ಬಿಎಸ್‌ಎನ್ ಟೆಲಿಕಾಂನ ಇತರೆ ಕೆಲವು ಜನಪ್ರಿಯ ಪ್ರಿಪೇಯ್ಡ್ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಬಿಎಸ್‌ಎನ್‌ಎಲ್ 2999ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 2999ರೂ. ಪ್ರೀಪೇಯ್ಡ್ ಯೋಜನೆ ದೀರ್ಘಾವಧಿಯ ಪ್ಲ್ಯಾನ್ ಆಗಿದ್ದು, ಪ್ರತಿದಿನ 3GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಹೆಚ್ಚುವರಿಯಾಗಿ 90 ದಿನಗಳ ವ್ಯಾಲಿಡಿಟಿ ಸಹ ಲಭ್ಯವಾಗಲಿದೆ. ಒಟ್ಟಾರೇ 455 ದಿನಗಳ ವ್ಯಾಲಿಡಿಟಿ ದೊರೆಯಲಿದೆ. (ಈ ಕೊಡುಗೆ ಮಾರ್ಚ್ 31, 2022 ರವರೆಗೆ ಪ್ರಚಾರದ ಕೊಡುಗೆ ಅನ್ವಯಿಸುತ್ತದೆ) ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಗೆ ಕಡಿಮೆಯಾಗುತ್ತದೆ.
ಬಿಎಸ್‌ಎನ್‌ಎಲ್ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 299ರೂ. ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, ಒಟ್ಟು 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 3 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಗೆ ಕಡಿಮೆಯಾಗುತ್ತದೆ.
ಬಿಎಸ್‌ಎನ್‌ಎಲ್ 2399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 2399ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವು ದೊರೆಯಲಿದೆ. ಹಾಗೆಯೇ ಮುಂಬೈ ಮತ್ತು ದೆಹಲಿ ಎಮ್‌ಟಿಎನ್‌ಎಲ್ ಬಳಕೆದಾರರಗೆ ಅನಿಯಮಿತ ಸಾಂಗ್ ಚೇಂಜ್ ಹಾಗೂ EROS ಚಂದಾದಾರಿಕೆ ಸಹ ಲಭ್ಯ ಆಗಲಿದೆ.
ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ.