Breaking News

ಬಿಜೆಪಿಗೆ ಸೇರಿದ ಕಾಂಗ್ರೆಸ್ ಮುಖಂಡರು

Spread the love

ಕೊಡೇಕಲ್ಲ (ಹುಣಸಗಿ): ಮುಂಬರುವ ಚುನಾವಣೆ ಹಿತದೃಷ್ಟಿಯಿಂದ ಎಲ್ಲ ಕಾರ್ಯಕರ್ತರು ಒಗ್ಗಟಾಗಿ ಬಿಜೆಪಿಯನ್ನು ಗ್ರಾಮೀಣ ಭಾಗದಲ್ಲಿ ಇನ್ನಷ್ಟು ಬಲಪಡಿಸಬೇಕು ಎಂದು ಶಾಸಕ ರಾಜುಗೌಡ ಹೇಳಿದರು.

ತಾಲ್ಲೂಕಿನ ಕೊಡೇಕಲ್ಲ ಗ್ರಾಮದ ಶಾಸಕರ ಕಚೇರಿಯಲ್ಲಿ ಭಾನುವಾರ ಕಡದರಾಳ ಗ್ರಾಮದ ಕಾಂಗ್ರೆಸ್ ಪ್ರಮುಖರನ್ನು ಬಿಜೆಪಿಗೆ ಬರಮಾಡಿಕೊಂಡು ಮಾತನಾಡಿದರು.

 

ಸುರಪುರ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಗಳು ನಡೆಯುತ್ತಿವೆ. ಆದರೆ ಇದನ್ನು ಸಹಿಸದ ಕೆಲ ಪ್ರತಿಪಕ್ಷದವರು ವಿನಾಕಾರಣ ಟೀಕೆಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಕಾರ್ಯಕರ್ತರು ಕಿವಿಗೊಡದೇ ಪಕ್ಷ ಸಂಘಟನೆಯೇ ಪ್ರಮುಖವಾಗಿಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಕಡದರಾಳ ಗ್ರಾಮದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ ಸದಸ್ಯ ಅಡಿವೆಪ್ಪ ಬಂಗಿ, ಬಸನಗೌಡ ಮಾಲಿಪಾಟೀಲ, ಕೃಷ್ಣ ಬಂಗಿ ಮತ್ತು ರಾಜವಾಳ ಗ್ರಾಮದ ಮಹೇಶ ದೇವರಮನಿ ಅವರಿಗೆ ಪಕ್ಷದ ಬಾವುಟ ನೀಡಿ ಬಿಜೆಪಿಗೆ ಬರಮಾಡಿಕೊಳ್ಳಲಾಯಿತು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ