Breaking News

ಹೈಕಮಾಂಡ್ ಈ ಬಾರಿ ಸಚಿವ ಸ್ಥಾನ ನೀಡಲಾಗುವುದು ಎಂದಿದೆ :ಶ್ರೀಮಂತ ಪಾಟೀಲ್

Spread the love

(ಬೆಳಗಾವಿ): ಈ ಬಾರಿಯ ಸಚಿವ ಸಂಪುಟ ವಿಸ್ತರಣೆ ವೇಳೆ ನನಗೆ ಮಂತ್ರಿಸ್ಥಾನ ನೀಡುವುದಾಗಿ ಹೈಕಮಾಂಡ್ ಹೇಳಿದೆ ಎಂದು ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ.ಕಾಗವಾಡ ತಾಲೂಕಿನ ಕೇಂಪವಾಡ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಬಾರಿ ಸಚಿವ ಸಂಪುಟದಲ್ಲಿ ನನಗೆ ಸ್ಥಾನ ತಪ್ಪಿದೆ. ಹಾಗಾಗಿ, ಈ ಬಾರಿ ಮಂತ್ರಿಸ್ಥಾನ ನೀಡಲಾಗುವುದೆಂದು ಹೈಕಮಾಂಡ್ ಹೇಳಿದೆ.

ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಮರಳುತ್ತಾರೆ ಎಂಬುದೆಲ್ಲಾ ಊಹಾಪೋಹ, ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ. ಮಾಡಿದರೂ ನಾನು ಬಿಜೆಪಿ ಪಕ್ಷ ಬಿಟ್ಟು ಎಲ್ಲೂ ಹೋಗುವುದಿಲ್ಲ. ಸದ್ಯದ್ರಲ್ಲೇ ರಾಜ್ಯ ಸರ್ಕಾರ ಬಜೆಟ್ ಮಂಡಿಸಲಿರುವುದರಿಂದ ಕ್ಷೇತ್ರದಲ್ಲಿ ಬಸವೇಶ್ವರ ನೀರಾವರಿ ಯೋಜನೆ ಹಣ ಮಂಜೂರು, ಕೆರೆ ತುಂಬಿಸುವ ಯೋಜನೆಗೆ ಸಿಎಂ ಹಣ ಬಿಡುಗಡೆ ಮಾಡುತ್ತಾರೆ ಎಂಬ ನಿರೀಕ್ಷೆ ಇದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ