ಬೆಂಗಳೂರು: ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿದ್ದಾರೆ. 2023ರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜನಪ್ರಿಯ ಘೋಷಣೆಯೊಂದಿಗೆ ಬಜೆಟ್ ಮಂಡಿಸುವ ಅನಿವಾರ್ಯತೆ ಸಿಎಂ ಬೊಮ್ಮಾಯಿ ಮೇಲಿದೆ. ಆದರೆ, ಆರ್ಥಿಕ ಸಂಕಷ್ಟದ ಮಧ್ಯೆ ಬಜೆಡ್ ಮಂಡಿಸುವ ಇಕ್ಕಟ್ಟಿನಲ್ಲಿ ಸಿಎಂ ಬೊಮ್ಮಾಯಿ ಸಿಲುಕಿದ್ದಾರೆ. ಸದ್ಯದ ಆರ್ಥಿಕ ಸ್ಥಿತಿಗತಿ ಏನಿದೆ ಎಂಬ ವರದಿ ಇಲ್ಲಿದೆ.
ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡಲು ಸಿಎಂ ನಿರ್ಧರಿಸಿದ್ದಾರೆ. 2023 ವಿಧಾನಸಭೆ ಚುನಾವಣೆ ಹಿನ್ನೆಲೆ ಸಿಎಂ ಬೊಮ್ಮಾಯಿಗೆ ಈ ಬಜೆಟ್ ನಿರ್ಣಾಯಕವಾಗಿದೆ. ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಜನರನ್ನು ಸೆಳೆಯುವ ಬಜೆಟ್ ಮಂಡಿಸುವ ಅನಿವಾರ್ಯತೆ ಬಿಜೆಪಿ ಸರ್ಕಾರದ್ದಾಗಿದೆ. ಆದರೆ ಆರ್ಥಿಕ ಸಂಕಷ್ಟ ಸಿಎಂ ಬೊಮ್ಮಾಯಿ ಬಜೆಟ್ ಮಂಡನೆಗೆ ಅಡ್ಡಗಾಲಾಗಿ ಪರಿಣಮಿಸಿದೆ.