Breaking News

ಸಂಪುಟ ಪುನಾರಚನೆಗೆ ಮುಂದಾದ ಸಿಎಂ ಬೊಮ್ಮಾಯಿ ನಾಳೆ ದೆಹಲಿ ಭೇಟಿ ಸಾಧ್ಯತೆ

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಪ್ರಧಾನಿ ಮೋದಿಯವರ ಭೇಟಿಗೆ ಸಿಎಂ ಸಮಯ ಕೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ, ಸಂಪುಟ ಪುನಾರಚನೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಪ್ರಧಾನಿ ಅವರೊಂದಿಗೆ ಸಿಎಂ ಚರ್ಚೆ ನಡೆಸುವ ಸಾಧ್ಯತೆ ಇದೆ.

ಮೇಕೆದಾಟು, ಕೃಷ್ಣಾ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಬಗ್ಗೆ ಸಿಎಂ ಚರ್ಚೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ, ರಾಜ್ಯ ಸಂಸದರನ್ನು ಭೇಟಿಯಾಗಿ ಬಜೆಟ್ ಪೂರ್ವ ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಸಿಎಂ ದೆಹಲಿ ಭೇಟಿ ಸಂದರ್ಭದಲ್ಲಿ ಸಂಪುಟ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವರಿಷ್ಠರು ಹಾಗೂ ರಾಜ್ಯದ ಅಭಿವೃದ್ಧಿ ವಿಚಾರಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿಯಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ