ಮೈಸೂರು: ರವಿ ಚನ್ನಣ್ಣನವರ್ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂದಿರುವ ದೂರು ಆಧರಿಸಿ ತನಿಖೆ ಶುರುವಾಗಿದೆ. ಯಾರು ಬೇಕಾದರೂ ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ಇನ್ನೂ ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ವರ್ಗಾವಣೆ ಶಿಕ್ಷೆಯಲ್ಲ. ರವಿ ಚನ್ನಣ್ಣನವರ್ ಅವರ ವರ್ಗಾವಣೆ ಆಡಳಿತಾತ್ಮಕ ನಿರ್ಧಾರ ಎಂದು ಮೈಸೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಹೇಳಿಕೆ ನೀಡಿದ್ದಾರೆ.
ರಾಷ್ಟ್ರ ಕಟ್ಟಲು ನಾವು ಬದುಕಬೇಕಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಕೊವಿಡ್ ಹಿನ್ನೆಲೆ ಪ್ರಶಿಕ್ಷಣಾರ್ಥಿಗಳ ಪೋಷಕರು ಭಾಗಿಯಾಗಿಲ್ಲ. ಒಂದು ಹೊಸ ರಕ್ತ ಗೃಹ ಇಲಾಖೆಗೆ ಸೇರ್ಪಡೆಯಾಗುತ್ತಿದೆ. ನಮ್ಮ ರಾಷ್ಟ್ರ ಧ್ವಜ ಪೊಲೀಸ್ ಧ್ವಜ ಒಟ್ಟಿಗೆ. ಅವರೆಡು ಬರಿ ಬಟ್ಟೆಯ ಚೂರಲ್ಲ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದಿಂದ ಗಳಿಸಿರುವ ಪವಿತ್ರ ಧ್ವಜ. ತ್ಯಾಗದ ಸಂದೇಶ ಇದರಲ್ಲಿ ಅಡಗಿದೆ. ರಾಷ್ಟ್ರ ಕಟ್ಟಲು ನಾವು ಬದುಕಬೇಕಿದೆ. ಬದುಕನ್ನು ಕಟ್ಟಿ ಮಡಿದರು ನಾವು ರಾಷ್ಟ್ರ ಕಟ್ಟಲು ಬದುಕಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಈ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದಾರೆ.
ಬಳಿಕ ಮಾತನಾಡಿದ ಅವರು, ರಕ್ಷಣೆ ಅಂದರೆ ಗಡಿಯ ಸೈನಿಕರು. ಆತಂರಿಕ ಭದ್ರತೆ ನಾಗರೀಕರ ಮಾನ ಪ್ರಾಣ ಕಾಪಾಡುವ ಹೊಣೆಗಾರಿಕೆ ಪೊಲೀಸರದ್ದು. ಸೈನಿಕರಷ್ಟೇ ಪೊಲೀಸರು 24*7 ಕೆಲಸ ಮಾಡುತ್ತಿದ್ದಾರೆ. ಸೈನಿಕರಿಗಿಂತ ಪೊಲೀಸರು ವಿಭಿನ್ನ. ಸೈನಿಕರಿಗೆ ಶತೃಗಳು ಕಾಣಿಸುತ್ತಾರೆ. ಕೊಲ್ಲಬೇಕು ಅಥವಾ ಮಡಿಯಬೇಕು. ಆದರೆ ಪೊಲೀಸರು ಕೊಲ್ಲಲು ಇಲ್ಲ ಕಾನೂನು ಇದಕ್ಕೆ ಅಡ್ಡಿಬರುತ್ತದೆ. ಸೈನಿಕರಷ್ಟು ಕಠಿಣವಾಗಿ ವರ್ತಿಸುವ ಹಾಗೆ ಇಲ್ಲ ಎಂದು ತಿಳಿಸಿದ್ದಾರೆ.