Breaking News

ಸೈಬರ್ ಖದೀಮರ ಹೆಡೆಮುರಿ ಕಟ್ಟಲು ಪೊಲೀಸ್ ಇಲಾಖೆ ತಯಾರಿ

Spread the love

ಬೆಂಗಳೂರು: ಸೈಬರ್ ಖದೀಮರ ಹೆಡೆಮುರಿ ಕಟ್ಟಲು ಪೊಲೀಸ್ ಇಲಾಖೆ ತಯಾರಿ ನಡೆಸಿದ್ದು, ನಗರದ ಎಂಟು ಸಿಇಎನ್ ಠಾಣೆಗೆ ಇಬ್ಬರು ಸೈಬರ್​ ​ಎಕ್ಸ್​ಪರ್ಟ್ಸ್​ಗಳನ್ನು ನೇಮಿಸಿಕೊಳ್ಳಲು ಪ್ರಕಟಣೆ ಹೊರಡಿಸಲಾಗಿದೆ.

ನಗರದಲ್ಲಿ ಇತ್ತೀಚೆಗೆ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಎಕ್ಸ್​ಪರ್ಟ್ಸ್ ನೇಮಕಕ್ಕೆ ಜಾಹೀರಾತು ನೀಡಲಾಗಿದೆ. ಕೇಸ್​ ಪತ್ತೆ ಹಚ್ಚಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಪ್ರಕರಣ ಭೇದಿಸುವಲ್ಲಿ ಪರದಾಡುತ್ತಿದ್ದಾರೆ.

ಕೌಶಲ್ಯತೆಯ ಕೊರತೆ ಕಂಡು ಬರುತ್ತಿದೆ. ಜೊತೆಗೆ ವರ್ಷದಿಂದ ವರ್ಷಕ್ಕೆ ಸಾವಿರಾರು ಸೈಬರ್ ಕ್ರೈಂ ಕೇಸ್ ದಾಖಲಾಗುತ್ತಿದೆ. ಹೀಗಾಗಿ, ಪ್ರಕರಣ​ ಪತ್ತೆಹಚ್ಚಲು ಪೊಲೀಸ್​ ಇಲಾಖೆ ನೂತನ ಪ್ಲಾನ್​ ಮಾಡಿದ್ದು, ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ