ಬೆಂಗಳೂರು: ಸೋಮಾರಿ ಮಂತ್ರಿಗಳನ್ನ ಕೈಬಿಡಬೇಕು ಎಂದು ಪರಿಷತ್ ಸದಸ್ಯರಾದ ಹೆಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ವಿಶ್ವನಾಥ್.. ಕೇವಲ ವಿಧಾನಸಭಾ ಕ್ಷೇತ್ರವನ್ನೇ ರಾಜ್ಯ ಅಂದುಕೊಂಡಿರುವ, ರಾಜ್ಯ ಪರ್ಯಟನೆ ಮಾಡದ ಸಚಿವರನ್ನ ಕೈಬಿಡಬೇಕು. ರಾಜ್ಯದ ಅಭಿವೃದ್ಧಿಗೆ ಬದಲಾವಣೆ ಅಗತ್ಯ ಇದೆ. ಸರಿಯಾದ ರೀತಿಯಲ್ಲಿ ಸಂಪುಟ ಪುನಾರಚಿಸಿ, ಆಡಳಿತಕ್ಕೆ ಚುರುಕು ಮುಟ್ಟಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೆ, ಹಿರಿಯ ಸಚಿವರು ಪಕ್ಷದ ಕೆಲಸ ಮಾಡ್ಲಿ, ಯುವ ಶಾಸಕರಿಗೆ ಸಂಪುಟದಲ್ಲಿ ಅವಕಾಶ ನೀಡಲಿ ಎಂದು ಸಲಹೆ ನೀಡಿದ್ದಾರೆ.
Laxmi News 24×7