Breaking News

ಯುವಕರ ಅಭ್ಯುದಯಕ್ಕೆ ಸರ್ಕಾರ ದಿಟ್ಟ ಹೆಜ್ಜೆ; ಗ್ರಾಮೀಣ ಮಟ್ಟದಲ್ಲೇ ವಿವಿಧ ಯೋಜನೆಗಳ ಯಶಸ್ವಿ ಅನುಷ್ಠಾನ

Spread the love

ಬೆಂಗಳೂರು: ಯುವ ಸಮುದಾಯದ ಅಭ್ಯುದಯಕ್ಕಾಗಿ ರೂಪಿಸಿರುವ ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದಿಂದಲೇ ಯಶಸ್ವಿಗೊಳಿಸಲು ಸರ್ಕಾರ ಮುಂದಾಗಿದ್ದು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾಯರ್åಕ್ರಮಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಇಲಾಖೆ ಮೂಲಕ ಅನುಷ್ಠಾನ ಮಾಡಲು ಯೋಜನೆ ರೂಪಿಸಿದೆ.

ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಮಿತಿಯನ್ನು 2019ರಲ್ಲಿ ರಚಿಸಲಾಗಿದೆ. ಆದರೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಿಬ್ಬಂದಿ, ಗ್ರಾಪಂ ಕೆಡಿಪಿ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಯುವ ಸಬಲೀಕರಣ ಇಲಾಖೆ ಮೂಲಕ ಸ್ಥಳೀಯ ಯುವಕ, ಯುವತಿ, ಸಂಘ, ಸಂಸ್ಥೆಗಳ, ಅಧ್ಯಕ್ಷರು, ಕಾರ್ಯದರ್ಶಿಗಳನ್ನ ಆಹ್ವಾನಿತ ಸದಸ್ಯರನ್ನಾಗಿ ನಿಯೋಜಿಸಲು ಆದೇಶ ಹೊರಡಿಸಲಾಗಿದೆ. ಎಲ್ಲ ಹಳ್ಳಿಗಳಲ್ಲಿ, ದೇಸೀ, ಜಾನಪದ ಮತ್ತು ಸ್ಥಳೀಯ ಕ್ರೀಡೆಗಳಿಗೆ ಉತ್ತೇಜನ ನೀಡಲು ಗ್ರಾಮೀಣ ಕ್ರೀಡೋತ್ಸವವನ್ನು ಆಯೋಜಿಸಲಾಗುತ್ತಿದೆ. ಅಲ್ಲದೇ ‘ನಮ್ಮೂರ ಶಾಲೆಗೆ ನಮ್ಮ ಯುವಜನರು’ ಕಾರ್ಯಕ್ರಮವನ್ನು ಶಾಲೆಗಾಗಿ ಕೊಡುಗೆ ನೀಡುವ ಯುವಸಂಘಗಳನ್ನು ತಾಲೂಕಿಗೆ ಒಂದರಂತೆ ಗುರುತಿಸಿ ಪುರಸ್ಕಾರ ನೀಡಲಾಗುತ್ತಿದೆ. ಅಮೃತ ಸಮುದಾಯ ಅಭಿವೃದ್ಧಿ ಯೋಜನೆ ಯನ್ನು ಎನ್​ಎಸ್​ಎಸ್ ಸ್ವಯಂ ಸೇವಕರ ಮೂಲಕ ಗ್ರಾಮೀಣಾ ಭಿವೃದ್ಧಿ ಯೋಜನೆಗಳಿಗೆ ಸಹಾಯ ನೀಡಲಾಗುತ್ತದೆ.

ಸಿಬ್ಬಂದಿ ಕೊರತೆಯಿಂದ ಪಂಚಾಯತಿಗಳ ಮಟ್ಟದಲ್ಲಿ ಇಲಾಖೆ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಆಗುತ್ತಿದ್ದ ತೊಂದರೆ ತಪ್ಪಿಸಲು ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಪಂಚಾಯಿತಿಗಳಿಗೆ ಆಹ್ವಾನಿತರಾಗಿ ಕಳುಹಿಸಲು ನಿರ್ಧರಿಸಲಾಗಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ