ಬೆಳಗಾವಿ: ಗೋವಾದ ಪಣಜಿಯ ಖಾಸಗಿ ಹೋಟೆಲ್ನಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಫಡ್ನವಿಸ್ (Devendra Fadnavis) ಜೊತೆ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಅರ್ಧ ಗಂಟೆ ಚರ್ಚೆ ನಡೆಸಿದ್ದಾರೆ. ರಾಜಕೀಯವಾಗಿ ತಮ್ಮನ್ನ ಟಾರ್ಗೆಟ್ ಮಾಡುತ್ತಿದ್ದಾರೆ. ಸುಖಾಸುಮ್ಮನೆ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಬಿಜೆಪಿಯ ಕೆಲ ನಾಯಕರ ನಡವಳಿಕೆ ಬೇಸರ ಮೂಡಿಸುತ್ತಿದೆ. ಪಕ್ಷಕ್ಕಾಗಿ ನಾನು ಮಾಡಿದ ತ್ಯಾಗವನ್ನು ಪರಿಗಣಿಸುತ್ತಿಲ್ಲ. ನಮ್ಮ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಅಂತ ರಮೇಶ್ ಜಾರಕಿಹೊಳಿ ಫಡ್ನವಿಸ್ ಜೊತೆ ಮಾತುಕತೆ ನಡೆಸಿದ್ದಾರೆ.
ಎಮ್ಎಲ್ಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿನ ಬಗ್ಗೆಯೂ ರಮೇಶ್ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಜತೆ ಕೆಲ ನಾಯಕರು ಒಪ್ಪಂದ ಮಾಡಿಕೊಂಡಿದ್ದರು. ಈ ಒಳ ಒಪ್ಪಂದದಿಂದ ಬಿಜೆಪಿ ಅಭ್ಯರ್ಥಿಗೆ ಸೋಲಾಗಿದೆ. ಇದನ್ನು ನಮ್ಮ ತಲೆಗೆ ಕಟ್ಟುವಂತಹ ಕೆಲಸ ಮಾಡುತ್ತಿದ್ದಾರೆ ಅಂತ ರಮೇಶ್ ಜಾರಕಿಹೊಳಿ ಫಡ್ನವಿಸ್ಗೆ ಮಾಹಿತಿ ನೀಡಿದ್ದಾರೆ.ಬಣ ರಾಜಕೀಯದ ಕುರಿತು ಫಡ್ನವಿಸ್ಗೆ ಜೊತೆ ಮಾತನಾಡಿದ ರಮೇಶ್, ಸಚಿವ ಸ್ಥಾನ ಕೊಡಿಸುವಂತೆ ಫಡ್ನವಿಸ್ಗೆ ಮನವಿ ಮಾಡಿದರು. ನನಗೆ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕಾಗಿ ಶ್ರಮಿಸುತ್ತೇನೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿಯನ್ನು ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸುವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸುತ್ತೇನೆ. ಈ ಬಗ್ಗೆ ಹೈಕಮಾಂಡ್ಗೆ ನೀವು ಮನವರಿಕೆ ಮಾಡಿಕೊಡಿ ಎಂದು ಮನವಿ ಮಾಡಿದರು. ಇದಕ್ಕೆ ಪಂಚರಾಜ್ಯ ಚುನಾವಣೆ ನಂತರ ಎಲ್ಲವನ್ನೂ ಸರಿಪಡಿಸುವುದಾಗಿ ಫಡ್ನವಿಸ್ ಭರವಸೆ ನೀಡಿದ್ದಾರೆ.