ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2020 ಮಾರ್ಚ್1ರ ವರೆಗೆ 8.72 ಲಕ್ಷ ಹುದ್ದೆಗಳು ಖಾಲಿ ಇದ್ದವು ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಗುರುವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.
ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ), ಕೇಂದ್ರ ಲೋಕ ಸೇವಾ ಆಯೋಗ(ಯುಪಿಎಸ್‌ಸಿ) ಮತ್ತು ರೈಲ್ವೆ ನೇಮಕಾತಿ ಮಂಡಳಿಗಳು (ಆರ್‌ಆರ್‌ಬಿ) 2018-19 ಮತ್ತು 2020-21ರ ಅವಧಿಯಲ್ಲಿ 2.65 ಲಕ್ಷ ನೇಮಕಾತಿಗಳನ್ನು ನಡೆಸಿವೆ ಎಂದೂ ಲಿಖಿತ ಉತ್ತರದಲ್ಲಿ ಸಚಿವರು ತಿಳಿಸಿದ್ದಾರೆ.
ಸಿಬ್ಬಂದಿ ನೇಮಕಾತಿ ಮಾಡುವ ಯುಪಿಎಸ್‌ಸಿ ಯಲ್ಲೇ 485 ಹುದ್ದೆಗಳು ಖಾಲಿ ಬಿದ್ದಿವೆ.
ಇದರಲ್ಲಿ ಎ ಗುಂಪಿನ 45, ಬಿ ಗುಂಪಿನ 240 ಮತ್ತು ಸಿ ಗುಂಪಿನ 200 ಹುದ್ದೆಗಳು ಸೇರಿವೆ ಎಂದು ಹೇಳಿದ್ದಾರೆ.
Laxmi News 24×7