ಬೆಳಗಾವಿ: ರಾಜ್ಯದ ಕರಾವಳಿ ಪ್ರದೇಶಕ್ಕೆ ಸೀಮಿತವಾಗಿದ್ದ ಹಿಜಾಬ್ ವಿವಾದ ಇದೀಗ ಕುಂದಾನಗರಿಗೂ ಕಾಲಿಟ್ಟಿದೆ.
ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದಿದೆ.
ಬೆಳಗಾವಿ: ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ PSI ಖಡಕ್ ವಾರ್ನಿಂಗ್ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಂತೆ ಮಾಹಿತಿ ಪಡೆದ ಪೊಲೀಸರು ಕಾಲೇಜು ಆವರಣಕ್ಕೆ ದೌಡಾಯಿಸಿದ್ದು, ವಿದ್ಯಾರ್ಥಿಗಳ ಕೊರಳಲ್ಲಿದ್ದ ಶಾಲು ತೆಗೆಸಿದರು. ಶಾಲಾ ಆವರಣದಲ್ಲಿ ಶಾಲು ಧರಿಸದಂತೆ ವಿದ್ಯಾರ್ಥಿಗಳಿಗೆ ಬುದ್ಧಿವಾದ ಹೇಳಿದ್ದಾರೆ.
ನಿನ್ನೆ ನಡೆದಿದ್ದ ಈ ಘಟನೆಯನ್ನ ಮುಚ್ಚಿ ಹಾಕಲು ಯತ್ನ ನಡೆದಿದೆ. ಇಡೀ ದಿನ ಹರಸಾಹಸ ಪಟ್ಟು ವಿದ್ಯಾರ್ಥಿಗಳ ಕೊರಳಲ್ಲಿದ್ದ ಕೇಸರಿ ಶಾಲು ತೆಗೆಸಲಾಗಿದೆ. ಕಾಲೇಜಿಗೆ ಸಂಬಂಧ ಇಲ್ಲದ ಯುವಕರು ವಿವಾದ ಸೃಷ್ಟಿಸುತ್ತಿದ್ದಾರೆ. ಈ ರೀತಿ ಮುಂದೆ ಕಾಲೇಜಿಗೆ ಬಾರದಂತೆ ಯುವಕರಿಗೆ ಪಿಎಸ್‌ಐ ವಾರ್ನಿಂಗ್ ಮಾಡಿದ್ದಾರೆ.
Laxmi News 24×7