ಬೆಂಗಳೂರು: ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ, ಗಣ ರಾಜ್ಯೋತ್ಸವ ಹಾಗೂ ನ.26ರ ಸಂವಿಧಾನ ದಿನದಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಇರಿಸಲು ತೀರ್ಮಾನ ಮಾಡಲಾಗಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದಲ್ಲಿ ಶುಕ್ರವಾರ ನಡೆದ ಆಡಳಿತಾತ್ಮಕ ಪೂರ್ಣಪೀಠ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಹೈಕೋರ್ಟ್ ಆದೇಶದ ಮೇರೆಗೆ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಸುತ್ತೋಲೆ ಹೊರಡಿಸಿ ಆಯಾ ನ್ಯಾಯಾಲಯಗಳ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.
Laxmi News 24×7