Breaking News

ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಫೋಟೋ ಕಡ್ಡಾಯ: ಹೈಕೋರ್ಟ್

Spread the love

ಬೆಂಗಳೂರು: ಹೈಕೋರ್ಟ್‌ ಸೇರಿ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವಗಳಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇಡುವುನ್ನು ಕಡ್ಡಾಯಗೊಳಿಸಲು ಹೈಕೋರ್ಟ್ ತೀರ್ಮಾನ ಕೈಗೊಂಡಿದೆ.

 

ರಾಯಚೂರು ಜಿಲ್ಲಾ ನ್ಯಾಯಾಧೀಶರು ಜನವರಿ 26 ರಂದು ಗಣರಾಜ್ಯೋತ್ಸವ ಸಮಾರಂಭದ ಸ್ಥಳದಿಂದ ಅಂಬೇಡ್ಕರ್ ಅವರ ಫೋಟೋ ತೆಗೆಸಿದ್ದಾರೆ ಎಂದು ಆರೋಪಿಸಿ ರಾಜ್ಯಾದ್ಯಂತ ಪ್ರತಿಭಟನೆ ವ್ಯಕ್ತವಾಗಿತ್ತು.

ಅಂಬೇಡ್ಕರ್ ಅವರ ಫೋಟೋ ಕೋರ್ಟ್ ಅಧಿಕೃತ ಸಮಾರಂಭಗಳಲ್ಲಿ ಇಡಲಾಗುತ್ತದೆ. ಜನವರಿ 26 ಗಣರಾಜ್ಯೋತ್ಸವ, ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ, ನವೆಂಬರ್ 26 ಸಂವಿಧಾನ ದಿನದಂದು ಅಂಬೇಡ್ಕರ್ ಅವರ ಫೋಟೋ ಇಡಲಾಗುವುದು.

ಜಿಲ್ಲಾ ಮತ್ತು ತಾಲೂಕು ಕೋರ್ಟುಗಳಿಗೆ ಇದರ ಬಗ್ಗೆ ಸೂಚನೆ ನೀಡಲಾಗಿದೆ ಎಂದು ರಿಜಿಸ್ಟ್ರಾರ್ ಜನರಲ್ ಡಿ.ಜಿ. ಶಿವಶಂಕರೇಗೌಡರು ಸೂಚನೆ ನೀಡಿದ್ದಾರೆ.

ನ್ಯಾಯಾಧೀಶರು, ತಾವು ಫೋಟೋ ತೆಗೆಸಿರಲಿಲ್ಲ. ತಮ್ಮ ಅರಿವಿಗೆ ಬಾರದೆ ಅಲ್ಲಿ ಫೋಟೋ ಇಟ್ಟು ತೆಗೆಯಲಾಗಿದೆ ಎಂದು ಸ್ಪಷ್ಟನೆ ನೀಡಿದ್ದರು. ಈ ಪ್ರಕರಣ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ವಿವಾದಕ್ಕೆ ಕಾರಣವಾಗಿತ್ತು. ಈಗ ಹೈಕೋರ್ಟ್ ಅಂಬೇಡ್ಕರ್ ಫೋಟೋ ವಿವಾದಕ್ಕೆ ಅಂತ್ಯಹಾಡಿದೆ ಎನ್ನಲಾಗಿದೆ.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ