Breaking News

ಮತ್ತಷ್ಟು ಹದಗೆಟ್ಟ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ

Spread the love

ವು ದಿನಗಳ ಅವರು ಕೋವಿಡ್ ಸೋಂಕು ಮತ್ತು ನ್ಯುಮೋನಿಯಾದಿಂದ ಚೇತರಿಸಿಕೊಂಡಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಮುಂಬೈ(ಮಹಾರಾಷ್ಟ್ರ): ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಅವರನ್ನು ವೆಂಟಿಲೇಟರ್​ನಲ್ಲಿ ಇರಿಸಲಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತಜ್ಞ ವೈದ್ಯರು ಮಾಹಿತಿ ನೀಡಿದ್ದಾರೆ.

 

ಆರೋಗ್ಯ ಮತ್ತೆ ಹದಗೆಟ್ಟಿರುವ ಕಾರಣದಿಂದ ಲತಾ ಮಂಗೇಶ್ಕರ್ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಮೇಲೆ ವೈದ್ಯರ ನಿಗಾ ಇರಿಸಲಾಗಿದೆ ಎಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಗೆ ದಾಖಲಾದಾಗ ಲತಾ ಮಂಗೇಶ್ಕರ್ ಅವರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು. ಕೆಲವು ದಿನಗಳ ಹಿಂದೆ ಅವರು ಕೋವಿಡ್ ಸೋಂಕು ಮತ್ತು ನ್ಯುಮೋನಿಯಾದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ತಿಳಿಸಿದ್ದರು.


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ