Breaking News

ಹಾಡುಹಕ್ಕಿ ಕೊನೆಯುಸಿರೆಳೆದಿದ್ದು, ಭಾರತೀಯ ಚಿತ್ರರಂಗ ಸೇರಿದಂತೆ ಇಡೀ ದೇಶವೇ ಶೋಕಸಾಗರದಲ್ಲಿ ಮುಳುಗಿದೆ.

Spread the love

ಮುಂಬೈ, ಮಹಾರಾಷ್ಟ್ರ: ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಿಸದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಲತಾ ಮಂಗೇಶ್ಕರ್​ ಅವರಿಗೆ 92 ವರ್ಷವಾಗಿತ್ತು.

ಜನವರಿ 9ರಂದು ಕೋವಿಡ್​ ದೃಢಪಟ್ಟ ಹಿನ್ನೆಲೆ ಲತಾ ಮಂಗೇಶ್ಕರ್​ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೋವಿಡ್ ಸೋಂಕು ಮತ್ತು ನ್ಯುಮೋನಿಯಾದಿಂದ ಸಂಪೂರ್ಣವಾಗಿ ಚೇತರಿಸಿಕೊಂಡ ಕಾರಣ ಹಾಗೂ ಅವರ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಕಳೆದ ವಾರ ಅವರಿಗೆ ಅಳವಡಿಸಿದ್ದ ವೆಂಟಿಲೇಟರ್​ ಅನ್ನು ತೆಗೆದುಹಾಕಲಾಗಿತ್ತು.

ಆದರೆ ನಿನ್ನೆಯಿಂದ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಪುನಃ ಅವರನ್ನು ವೆಂಟಿಲೇಟರ್​ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಹಾಡುಹಕ್ಕಿ ಕೊನೆಯುಸಿರೆಳೆದಿದ್ದು, ಭಾರತೀಯ ಚಿತ್ರರಂಗ ಸೇರಿದಂತೆ ಇಡೀ ದೇಶವೇ ಶೋಕಸಾಗರದಲ್ಲಿ ಮುಳುಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ