Breaking News

ಆಪ್ತರ ಮೂಲಕ ಇಬ್ರಾಹಿಂ ಮನವೊಲಿಸಲು ಸಿದ್ದು ಯತ್ನ

Spread the love

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರನ್ನು ಪಕ್ಷ ತೊರೆಯದಂತೆ ಮನವೊಲಿಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಆಪ್ತರ ಮೂಲಕ ಪ್ರಯತ್ನ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಧಾನ ಪರಿಷತ್‌ ವಿಪಕ್ಷ ನಾಯಕನ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಮುನಿಸಿಕೊಂಡಿರುವ ಇಬ್ರಾಹಿಂ ಕಾಂಗ್ರೆಸ್‌ ತೊರೆಯಲು ನಿರ್ಧರಿಸಿದ್ದು, ಶೀಘ್ರವೇ ಕಾಂಗ್ರೆಸ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್‌ ಸೇರಲು ನಿರ್ಧರಿಸಿದ್ದಾರೆ.

 

ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಆಪ್ತರ ಮೂಲಕ ಇಬ್ರಾಹಿಂ ಕಾಂಗ್ರೆಸ್‌ನಲ್ಲಿಯೇ ಉಳಿಯುವಂತೆ ಅವರ ಮನ ವೊಲಿಸಲು ಕಸರತ್ತು ನಡೆಸಿದ್ದಾರೆ. ರವಿವಾರ ಜಮೀರ್‌ ಅಹ್ಮದ್‌, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಅನಂತರ ಖಾಸಗಿ ಕಾರ್ಯಕ್ರಮದಲ್ಲಿ ಇಬ್ರಾಹಿಂ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಹಾದೇವಪ್ಪ ಸಂಧಾನ
ಇಬ್ರಾಹಿಂ ಅವರ ಜತೆ ಮಾಜಿ ಸಚಿವ ಎಚ್‌.ಸಿ. ಮಹಾದೇವಪ್ಪ, ದೂರವಾಣಿ ಮೂಲಕ ಸುಮಾರು ಅರ್ಧಗಂಟೆ ಚರ್ಚೆ ನಡೆಸಿದ ಸಂದರ್ಭದಲ್ಲಿ ಇಬ್ರಾಹಿಂ ತಮಗೆ ಆಗಿರುವ ಅನ್ಯಾಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಸೂಚನೆಯಂತೆ ಇಬ್ರಾಹಿಂ ಜತೆ ಮಾತನಾಡಿದ್ದೇನೆ. ಅವರಿಗೆ ಪಕ್ಷ ತಮ್ಮನ್ನು ನಡೆಸಿಕೊಂಡಿರುವ ಬಗ್ಗೆ ಬೇಸರವಿದೆ. ಶೀಘ್ರವೇ ಅವರನ್ನು ಭೇಟಿ ಮಾಡಿ ಮತ್ತೆ ಮಾತನಾಡುತ್ತೇನೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ