Breaking News

ಕೆಪಿಟಿಸಿಎಲ್‌: ಇಂಧನ ಇಲಾಖೆ ನೇಮಕಾತಿ ಕನ್ನಡಿಗರಿಗೇ ಆದ್ಯತೆ

Spread the love

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್‌) ವ್ಯಾಪ್ತಿಯ ಐದು ಕಂಪನಿಗಳಲ್ಲಿ (ಬೆಸ್ಕಾಂ, ಸೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ) ಖಾಲಿಯಿರುವ ಸಹಾಯಕ ಎಂಜಿನಿಯರ್‌, ಕಿರಿಯ ಸಹಾಯಕ ಎಂಜಿನಿಯರ್‌ ಹಾಗೂ ಕಿರಿಯ ಸಹಾಯಕ ಹುದ್ದೆಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ತೇರ್ಗಡೆ ಆದವರಿಗೆ ಮಾತ್ರ ಅರ್ಹತಾ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

 

ಸರ್ಕಾರದ ಈ ಕ್ರಮದಿಂದಾಗಿ ವಿವಿಧ ಎಸ್ಕಾಂಗಳಲ್ಲಿ ಕನ್ನಡಿಗರೇ ಉದ್ಯೋಗ ಪಡೆಯಲು ಸಹಾಯಕವಾಗಲಿದೆ. ಈ ಬಾರಿ 1,456 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ನೇಮಕಾತಿ ಅಧಿಸೂಚನೆ ಯನ್ನು ಈಗಾಗಲೇ ಹೊರಡಿಸಲಾಗಿದೆ.

7ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಮಾರ್ಚ್ 7 ಕೊನೆಯ ದಿನ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆಯ್ಕೆ ಪರೀಕ್ಷೆ ನಡೆಸಲಿದೆ. ಕೆಇಎ ನಡೆಸುವ ಅಪ್ಟಿಟ್ಯೂಡ್ ಪರೀಕ್ಷೆಗೆ ಅರ್ಹತೆ ಪಡೆಯಲು ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆಯಬೇಕು.

2015 ರಲ್ಲಿ ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದಾಗ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಹಾಗೂ ಇತರ ತಾಂತ್ರಿಕ ಹುದ್ದೆಗಳ ನೇಮಕದಲ್ಲಿ ಕಡ್ಡಾಯ ಕನ್ನಡ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿತ್ತು. ಇದರಿಂದ 60 ಕ್ಕೂ ಹೆಚ್ಚು ಹುದ್ದೆಗಳು ಆಂಧ್ರಪ್ರದೇಶ ಸೇರಿದಂತೆ ಹೊರ ರಾಜ್ಯಗಳ ಅಭ್ಯರ್ಥಿಗಳ ಪಾಲಾಗಿತ್ತು. ಈ ಬಗ್ಗೆ ಕನ್ನಡಪರ ಸಂಘಟನೆಗಳು, ವಿದ್ಯಾರ್ಥಿ ಒಕ್ಕೂಟಗಳು ವಿರೋಧಿಸಿದ್ದರೂ ಪ್ರಯೋಜನ ಆಗಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಎಷ್ಟು ಹುದ್ದೆಗಳು?

ವೃಂದ; ಕಲ್ಯಾಣ ಕರ್ನಾಟಕ; ಮಿಕ್ಕುಳಿದ ವೃಂದ
ಸಹಾಯಕ ಎಂಜಿನಿಯರ್ (ವಿದ್ಯುತ್ ); 106; 399
ಸಹಾಯಕ ಎಂಜಿನಿಯರ್ (ಸಿವಿಲ್ ); 7; 21
ಕಿರಿಯ ಎಂಜಿನಿಯರ್ (ವಿದ್ಯುತ್ ); 84; 486
ಕಿರಿಯ ಎಂಜಿನಿಯರ್ (ಸಿವಿಲ್ ); 8; 21
ಕಿರಿಯ ಸಹಾಯಕ; 3; 357


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ