Breaking News

ಗೋವಾ ಚುನಾವಣೆ: ಎರಡು ದಿನ ಸಿದ್ದರಾಮಯ್ಯ ಪ್ರಚಾರ

Spread the love

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗೋವಾ ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ. ಎರಡು ದಿನಗಳ ಕಾಲ ಗೋವಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಲ ಪ್ರಚಾರ ನಡೆಸಲಿದ್ದಾರೆ. ಮಂಗಳವಾರ ಗೋವಾ ತೆರಳಲಿರುವ ಸಿದ್ದರಾಮಯ್ಯ ಮರಮಗಾವ್, ವಾಸ್ಕೋ, ದಾಬೊಲಿಮ್, ಕಾರ್ತಲಿಮ್​ನಲ್ಲಿ ಪ್ರಚಾರ ನಡೆಸಲಿದ್ದಾರೆ. ಬುಧವಾರ ಚುನಾವಣಾ ವೀಕ್ಷಕರ ಸಭೆಯಲ್ಲೂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಾ ಗೋವಾದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಇದಾದ ಬಳಿಕ ಇದೀಗ ಸಿದ್ದರಾಮಯ್ಯ ಕೂಡಾ ಗೋವಾಗೆ ತೆರಳಿ ಕಾಂಗ್ರೆಸ್ ಪರ ಕ್ಯಾಂಪೇನ್ ನಡೆಸಲಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ