Breaking News

ಹಿಜಾಬ್ ವರ್ಸಸ್ ಕೇಸರಿ ವಿವಾದ: ಕೋರ್ಟ ತೀರ್ಪು ಬಂದ ಬಳಿಕ ನಿರ್ಧಾರ: ಸಿಎಂ

Spread the love

ರಾಜ್ಯದಲ್ಲಿ ಹಿಜಾಬ್ ವರ್ಸಸ್ ಕೇಸರಿ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಮೌನ ಮುರಿದಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಿದ್ಯಾರ್ಥಿಗಳು ಶಾಂತಿ ಕದಡುವ ಕೆಲಸ ಮಾಡಬಾರದು. ನಾಳೆ ಕೋರ್ಟನಿಂದ ತೀರ್ಪು ಬರುತ್ತದೆ. ತೀರ್ಪು ಬಂದ ಬಳಿಕ ಮುಂದಿನ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ ಹಿಜಾಬ್ ವಿವಾದದ ಹಿಂದೆ ಕೆಲ ಶಕ್ತಿಗಳು ಕೆಲಸ ಮಾಡುತ್ತಿವೆ. ಕೇರಳ, ಮಹಾರಾಷ್ಟ್ರದಲ್ಲಿಯೂ ಈ ಹಿಂದೆ ವಿವಾದ ಇತ್ತು. ಸದ್ಯ ಕೋರ್ಟನಲ್ಲಿ ಕೇಸ್ ಇರುವ ಹಿನ್ನೆಲೆ ಮಾತಾಡಲ್ಲ. ನಾಳೆ ಕೋರ್ಟನಿಂದ ತೀರ್ಪು ಬರುತ್ತದೆ. ತೀರ್ಪು ಬಂದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ. ಇನ್ನು ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಶಾಂತಿ ಕದಡುವ ಕೆಲಸ ಮಾಡಬಾರದು ಎಂದರು.

ಇನ್ನು ರಾಜ್ಯಕ್ಕೆ ನ್ಯಾಯ ಸಮ್ಮತ ನೀರಿನ ಪಾಲು ಪಡೆದುಕೊಳ್ಳುತ್ತೇವೆ. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ನೀರಿನ ವಿಚಾರದಲ್ಲಿ ಯಾವುದೇ ರಾಜಿ ಆಗುವುದಿಲ್ಲ. ನದಿ ಜೋಡಣೆ ಬಗ್ಗೆ ನಮಗೆ ಸ್ಪಷ್ಟವಾದ ನಿಲುವಿದೆ. ನಮ್ಮ ನಿಲುವನ್ನು ನಾವು ಸ್ಪಷ್ಟವಾಗಿ ಕೇಂದ್ರದ ಮುಂದೆ ಮಂಡಿಸುತ್ತೇವೆ ಎಂದು ಸಿಎಂ ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ