Breaking News

ಸಿಬಿಐ ತನಿಖೆಯ ಸಿಂಧುತ್ವ ಪ್ರಶ್ನಿಸಿದ್ದ ಮೇಲ್ಮನವಿ: ವಿನಯ್ ಕುಲಕರ್ಣಿ ಅರ್ಜಿ ವಜಾ

Spread the love

ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶಗೌಡ ಗೌಡರ್ ಕೊಲೆ ಪ್ರಕರಣದ ಸಿಬಿಐ ತನಿಖೆಯ ಸಿಂಧುತ್ವವನ್ನು ಪ್ರಶ್ನಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ರವೀಂದ್ರ ಭಟ್ ಹಾಗೂ‌ ಪಿ.ಎಸ್.ನರಸಿಂಹ ಅವರಿದ್ದ ಪೀಠವು ಕೊಲೆ ಪ್ರಕರಣದ ಸಿಬಿಐ ತನಿಖೆಯನ್ನು ಪ್ರಶ್ನಿಸಿ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾ‌ ಮಾಡಿತು.

 

ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವು 2019ರಲ್ಲಿ ಸಿಬಿಐ ತನಿಖೆಗೆ ಆದೇಶಿಸಿತ್ತು.

2016ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಕುಲಕರ್ಣಿ ಭಾಗಿಯಾಗಿದ್ದಾರೆ ಎಂದು ಯೋಗೇಶಗೌಡ ಕುಟುಂಬ ಸದಸ್ಯರು ಆರೋಪಿಸಿದ್ದರು. ನಂತರ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿದ್ದ ವಿನಯ್ ಕುಲಕರ್ಣಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ