ಬೆಂಗಳೂರು : ಗ್ರಾಮ ಪಂಚಾಯಿತಿಯಲ್ಲಿ ನೇಮಕಕ್ಕೆ ಯಾವುದೇ ಗ್ರಾಮ ಪಂಚಾಯಿತಿಗೆ ಅಧಿಕಾರ ನೀಡಿಲ್ಲ. ಜಿಲ್ಲಾ ಪಂಚಾಯಿತ್ ಸಿಇಓಗಳೇ ಈ ಕಾರ್ಯ ಮಾಡುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಬಿಜೆಪಿ ಶಾಸಕ ಸುಕುಮಾರ್ ಶೆಟ್ಟಿ ಅವರು ಶೂನ್ಯವೇಳೆಯ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಗ್ರಾಮ ಪಂಚಾಯಿತಿಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಖಾಲಿ ಹುದ್ದೆಗಳಿವೆ.
ಆದರೆ ಅವರಿಗೆ ನೇಮಕ ಅಧಿಕಾರ ನೀಡಿದರೆ ಒಬ್ಬೊಬ್ಬ ಅಧ್ಯಕ್ಷರು ಬಂದಾಗ ಒಂದೊಂದು ರೀತಿಯ ಸಮಸ್ಯೆ ಆಗುತ್ತದೆ. ಹೀಗಾಗಿ ಗ್ರಾಮ ಪಂಚಾಯಿತಿಗಳಿಗೆ ನೇಮಕ ಅಧಿಕಾರ ಕೊಟ್ಟಿಲ್ಲ ಎಂದು ಹೇಳಿದರು.