Breaking News

ಗಣಿ ಬಾಧಿತ ಪ್ರದೇಶ ಅಭಿವೃದ್ಧಿ ಯೋಜನೆ: ಸುಪ್ರೀಂಕೋರ್ಟ್‌ ಅನುಮತಿ ಸಿಕ್ಕಿಲ್ಲ

Spread the love

ವಿಧಾನಪರಿಷತ್ತು: ಗಣಿ ಬಾಧಿತ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ 24 ಸಾವಿರ ಕೋಟಿ ರೂ. ಮೊತ್ತದ “ಗಣಿಗಾರಿಕೆಯ ಪ್ರಭಾವಕ್ಕೆ ಒಳಗಾದ ವಲಯಗಳ ಸಮಗ್ರ ಪರಿಸರ ಯೋಜನೆ’ಯ ಅನುಷ್ಠಾನದ ಅನುಮತಿಗಾಗಿ ಎಂಟು ಬಾರಿ ಸುಪ್ರೀಂಕೋರ್ಟ್‌ ಕದ ತಟ್ಟಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್‌ ತಿಳಿಸಿದ್ದಾರೆ.

 

ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಕೆ.ಎ ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸುಪ್ರೀಂಕೋರ್ಟ್‌ ಆದೇಶದಂತೆ ಗಣಿ ಬಾಧಿತ ಪ್ರದೇಶಗಳ ಸಾಮಾಜಿಕ, ಆರ್ಥಿಕ ಮತ್ತು ಪರಿಸರ ಅಭಿವೃದ್ಧಿಗೆ ಪೂರಕವಾದ ಪರಿಸರ ಪುನಶ್ಚೇತನ, ಕೃಷಿ, ನೈರ್ಮಲ್ಯ, ಆರೋಗ್ಯ, ಶಿಕ್ಷಣ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಲು 2018ರಲ್ಲಿ ಸಮಗ್ರ ಯೋಜನೆ ರೂಪಿಸಲಾಗಿದೆ ಎಂದರು.

ಈ ಯೋಜನೆಗೆ ಸುಪ್ರೀಂಕೋರ್ಟ್‌ ಅನುಮೋದನೆ ಸಿಕ್ಕಿಲ್ಲ. ಅನುಮೋದನೆ ಪಡೆದುಕೊಳ್ಳಲು ಅಡ್ವೋಕೇಟ್‌ ಜನರಲ್‌, ಸಾಲಿಸಿಟರ್‌ ಜನರಲ್‌ ಮುಖಾಂತರ ಸುಮಾರು ಎಂಟು ಬಾರಿ ಸುಪ್ರೀಂಕೋರ್ಟ್‌ಗೆ ಮೊರೆ ಹೋಗಲಾಗಿದೆ. ಅಲ್ಲದೇ 2022ರ ಜನೆವರಿ ಅಂತ್ಯದವರೆಗೆ 19 ಸಾವಿರ ಕೋಟಿ ರೂ. ಸಂಗ್ರಹವಾಗಿದ್ದು, ಈ ಹಣ ಸುಪ್ರೀಂಕೋರ್ಟ್‌ ರಚಿಸಿರುವ ಮೇಲ್ವಿಚಾರಣಾ ಸಮಿತಿಯ ಸುಪರ್ದಿಯಲ್ಲಿದೆ ಎಂ ದು ಸಚಿವರು ತಿಳಿಸಿದರು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ