Breaking News

ಭದ್ರತಾ ಲೋಪ: NSA ಅಜಿತ್ ದೋವಲ್ ನಿವಾಸ ಪ್ರವೇಶಿಸಲು ಯತ್ನ, ಬೆಂಗಳೂರಿನ ಯುವಕನ ವಿಚಾರಣೆ

Spread the love

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್ ಎಸ್ ಎ) ಅಜಿತ್ ದೋವಲ್ ನಿವಾಸದಲ್ಲಿ ಭದ್ರತಾ ಲೋಪ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಬುಧವಾರ (ಫೆ.16) ದೋವಲ್ ನಿವಾಸದೊಳಕ್ಕೆ ಪ್ರವೇಶಿಸಲು ಯತ್ನಿಸಿರುವುದಾಗಿ ವರದಿ ತಿಳಿಸಿದೆ.

ಮನೆ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ಭದ್ರತಾ ಸಿಬಂದಿಗಳು ತಡೆದಿದ್ದು, ಈತನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿ ವಿವರಿಸಿದೆ.

ಮೂಲಗಳ ಪ್ರಕಾರ, ದೋವಲ್ ನಿವಾಸದೊಳಕ್ಕೆ ಪ್ರವೇಶಿಸಿದ ವ್ಯಕ್ತಿ ತನ್ನ ದೇಹದೊಳಗೆ ಚಿಪ್ ಇದ್ದು, ಇದನ್ನು ಬಾಹ್ಯವಾಗಿ ನಿಯಂತ್ರಿಸಲಾಗುತ್ತಿದೆ ಎಂದು ಹೇಳಿದ್ದ.

ಎನ್ ಎಸ್ ಎ ಅಜಿತ್ ದೋವಲ್ ನಿವಾಸ ಪ್ರವೇಶಿಸಲು ಯತ್ನಿಸಿದ್ದ ವ್ಯಕ್ತಿಯನ್ನು ಬೆಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ. ಈ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ದು ಎಂಆರ್ ಐ ಸ್ಕ್ಯಾನ್ ಮಾಡಿಸಿದ್ದು, ಯಾವುದೇ ಚಿಪ್ ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ