Breaking News

ಶಾಸಕ ಸತೀಶ್‌ ಜಾರಕಿಹೊಳಿ ಪ್ರಶ್ನೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಉತ್ತರ

Spread the love

ಬೆಂಗಳೂರು: ವಿಧಾನಮಂಡಲದ ಅಧಿವೇಶನದಲ್ಲಿ ಮಂಗಳವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಅವುಗಳನ್ನು ಭರ್ತಿ ಮಾಡಲು ಸರ್ಕಾರ ತೆಗೆದುಕೊಂಡಿರುವ ಕ್ರಮ ಏನು? ಎಂದು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಉತ್ತರಿಸಿದ್ದಾರೆ.

ಶಾಸಕ ಸತೀಶ್‌ ಜಾರಕಿಹೊಳಿ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, 2021-22ನೇ ಸಾಲಿನಲ್ಲಿ ಸರ್ಕಾರ 1171 ಪೊಲೀಸ್‌ ಸಬ್‌ ಇನ್ಸ್ಪೆಕ್ಟರ್‌ ಹುದ್ದೆಗಳಿಗೆ ಸರ್ಕಾರವು ಮಂಜೂರಾತಿ ನೀಡಿದ್ದು, ಸದರಿ ಹುದ್ದೆಗಳಲ್ಲಿ 686 ಹುದ್ದೆಗಳಿಗೆ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ವೈದ್ಯಕೀಯ ಪರೀಕ್ಷೆ ಮತ್ತು ದಾಖಲಾತಿಗಳ ಪರೀಕ್ಷೆ ನಡೆಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

402 ಹುದ್ದೆಗಳಗೆ ಶೀಘ್ರದಲ್ಲಿ ಲಿಖಿತ ಪರೀಕ್ಷೆ ನಡೆಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಹಾಗೂ 20 ಪಿಎಸೈ (ಕ್ರೀಡೆ) ಹುದ್ದೆಗಳ ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಪ್ರಕ್ತಿಯೆ ಚಾಲ್ತಿಯಲ್ಲಿರುತ್ತದೆ. 63 ಕೆ.ಎಸ್‌.ಐ.ಎಸ್.‌ ಎಫ್‌ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದರು.

ಇನ್ನೂ 2021-22ನೇ ಸಾಲಿನಲ್ಲಿ 4000 ಪೊಲೀಸ್‌ ಕಾನ್ಸ್ಟೇಬಲ್‌ ಹುದ್ದೆಗಳಿಗೆ ಸರ್ಕಾರವು ಮಂಜೂರಾತಿ ನೀಡಿದ್ದು, ಸದರಿ ಹುದ್ದೆಗಳಲ್ಲಿ 3920 ಹುದ್ದೆಗಳಿಗೆ 1:1 ಪ್ರಮಾಣದ ಆಯ್ಕೆ ಪಟ್ಟಿಯನ್ನು ತಯಾರಿಸಿ ಘಟಕಾಧಿಕಾರಿಗಳಿಗೆ ಕಳುಹಿಸಿಕೊಡಲಾಗಿರುತ್ತದೆ. ಹಾಗೂ ಉಳಿದ 80 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ತಯಾರಿಸಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ.

ಇನ್ನುಳಿದಂತೆ ಮುಂಬಡ್ತಿ ಹುದ್ದೆಗಳನ್ನು ಆಯಾ ವೃಂದದವರಿಗೆ ಮುಂಬಡ್ತಿ ನೀಡುವ ಮೂಲಕ ಭರ್ತಿ ಮಾಡುವ ಪ್ರಕ್ತಿಯೆ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಪೊಲೀಸ್‌ ಇಲಾಖೆಯ ಆಂತರಿಕ ವಿಭಾಗಗಳ ವಿವರವನ್ನು ನೀಡಿದ್ದು, ಈ ಕೆಳಗಿನಂತಿವೆ.

ಸಿಐಡಿ ಘಟಕ, ರಾಜ್ಯ ಗುಪ್ತ ವಾರ್ತೆ, ಆಂತರಿಕ ಭದ್ರತಾ ವಿಭಾಗ, ಕಡಲು ಕಾವಲು ಪಡೆ, ನಕ್ಸಲ್‌ ನಿಗ್ರಹ ದಳ, ನೇಮಕಾತಿ, ತರಬೇತಿ, ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ, ರಾಜ್ಯ ಅಫರಾದ ದಾಖಲಾತಿ ವಿಭಾಗ, ಕರ್ನಾಟಕ ಲೋಕಾಯುಕ್ತ, ಭ್ರಷ್ಟಾಚಾರ ನಿಗ್ರಹ ದಳ, ಕೆ.ಎಸ್.ಆರ್.ಪಿ, ಕೆ.ಎಸ್.ಐ.ಎಸ್‌.ಎಫ್‌, ಬೆರಳು ಮುದ್ರೆ ಸಂಗ್ರಹಾಲಯ,ಪೊಲೀಸ್‌ ನಿಸ್ತಂತು ಘಟಕ, ನ್ಯಾಯ ವಿಜ್ಞಾನ ಪ್ರಯೋಗಾಲಯ, ಕರ್ನಾಟಕ ರಾಜ್ಯ ರೈಲ್ವೇ ಪೊಲೀಸ್‌, ಕೆ.ಎ.ಆರ್.ಪಿ ಮೌಂಟೆಟ್‌ ಕಂಪನಿ ಪೊಲೀಸ್‌ ಇಲಾಖೆಯ ಆಂತರಿಕ ವಿಭಾಗಗಳಾಗಿವೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ