Breaking News

ಐದು ನದಿಗಳ ಜೋಡಣೆ – ನಾಳೆ ಕೇಂದ್ರ ರಾಜ್ಯಗಳ ಸಭೆ

Spread the love

ನವದೆಹಲಿ: ಐದು ನದಿಗಳ ಜೋಡಣೆಗೆ ಬಜೆಟ್ ಘೋಷಣೆಯಾದ ಬೆನ್ನಲ್ಲೇ ಕೇಂದ್ರ ಜಲ ಸಂಪನ್ಮೂಲ ಸಚಿವಾಲಯ ಕಾರ್ಯಪ್ರವೃತ್ತವಾಗಿದೆ. ನದಿ ಜೋಡಣೆ ಸಂಬಂಧ ಚರ್ಚಿಸಲು ದಕ್ಷಿಣ ರಾಜ್ಯಗಳ ಮೊದಲ ಸಭೆ ಕರೆದಿದೆ.

ನಾಳೆ ಕೇಂದ್ರ ಜಲ ಸಂಪನ್ಮೂಲ ಸಚಿವಾಲಯದ ನೇತೃತ್ವದಲ್ಲಿ ಮೊದಲ ಸಭೆ ನಡೆಯಲಿದ್ದು, ಸಭೆಯಲ್ಲಿ ಕಾವೇರಿ-ಗೋದಾವರಿ, ಕೃಷ್ಣಾ-ಪೆನ್ನಾರು ಸೇರಿದಂತೆ ನದಿ ಜೋಡಣೆ ಯೋಜನೆಗಳ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಲಿದ್ದು, ಸಭೆಯಲ್ಲಿ ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ಮಾಡಲಿದ್ದಾರೆ. ಅಲ್ಲದೇ ನದಿ ಜೋಡಣೆ ಬಗ್ಗೆ ರಾಜ್ಯಗಳ ಅಭಿಪ್ರಾಯವನ್ನು ಜಲ ಸಂಪನ್ಮೂಲ ಇಲಾಖೆ ಪಡೆಯಲಿದೆ.ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಲಿದ್ದು, ಸಭೆಯಲ್ಲಿ ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ಮಾಡಲಿದ್ದಾರೆ. ಅಲ್ಲದೇ ನದಿ ಜೋಡಣೆ ಬಗ್ಗೆ ರಾಜ್ಯಗಳ ಅಭಿಪ್ರಾಯವನ್ನು ಜಲ ಸಂಪನ್ಮೂಲ ಇಲಾಖೆ ಪಡೆಯಲಿದೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ