Breaking News

ಕರ್ನಾಟಕದಲ್ಲಿ ಹೂಡಿಕೆ ಮಾಡಲು ತೈವಾನ್ ಕಂಪನಿಗಳಿಗೆ ನಿರಾಣಿ ಆಹ್ವಾನ

Spread the love

ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆ ಮಾಡಲು ತೈವಾನ್ ಕಂಪನಿಗಳನ್ನು ಆಹ್ವಾನಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಸರ್ಕಾರದಿಂದ ಎಲ್ಲಾ ಬೆಂಬಲ ಮತ್ತು ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಗುರುವಾರ ತೈವಾನ್ ದೇಶದ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ರಾಯಭಾರಿ ಬಾಶುವಾನ್ ನೇತೃತ್ವದ ನಿಯೋಗವನ್ನು ಭೇಟಿ ಮಾಡಿದ ಅವರು, ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ ಹೇಗೆ ಮತ್ತು ಅದಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳೇನು ಎಂಬುದನ್ನು ಮನವರಿಕೆ ಮಾಡಿಕೊಟ್ಟರು.

ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ತೈಪೆ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ಉನ್ನತ ಮಟ್ಟದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ ಹೂಡಿಕೆ ಅವಕಾಶಗಳ ಕುರಿತು ಮಾತುಕತೆ ನಡೆಸಿದೆ.

ಕರ್ನಾಟಕ ಮತ್ತು ತೈವಾನ್ ನಡುವೆ ಹಲವು ಸಾಮ್ಯತೆಗಳಿದ್ದು, ಇಎಸ್‍ಡಿಎಂ, ಎಲೆಕ್ಟ್ರಿಕ್ ವೆಹಿಕಲ್ಸ್, ಆಟೋ ಮತ್ತು ಆಟೋ ಕಾಂಪೊನೆಂಟ್ಸ್, ಹೆಲ್ತ್‍ಕೇರ್, ಇಂಜಿನಿಯರಿಂಗ್ ಮತ್ತು ಮೆಷಿನ್ ಟೂಲ್ ಮುಂತಾದ ಪ್ರಮುಖ ಉದ್ಯಮಗಳಲ್ಲಿ ಮುಂಚೂಣಿ ಸಾಧಿಸಿವೆ ಎಂದರು.

ವಿಸ್ಟ್ರಾನ್ ಕಾರ್ಪೋರೇಶನ್, ಮೀಡಿಯಾಟೆಕ್, ಡೆಲ್ಟಾ ಎಲೆಕ್ಟ್ರಾನಿಕ್ಸ್ ಮತ್ತು ಡಿ-ಲಿಂಕ್ ಸೇರಿದಂತೆ ಪ್ರಮುಖ ತೈವಾನಿ ಕಂಪನಿಗಳಿಗೆ ಕರ್ನಾಟಕ ನೆಲೆಯಾಗಿದೆ. ಇತರ ತೈವಾನ್ ಕಂಪನಿಗಳೂ ನಮ್ಮ ರಾಜ್ಯದಲ್ಲಿ ಹೂಡಿಕೆ ಮಾಡಬಹುದು, ಅದಕ್ಕೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ವಿವರಿಸಿದರು.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ