ತುಮಕೂರು: ಹಿಜಬ್ ತೆಗೆದು ತರಗತಿಯೊಳಗೆ ಬರಬೇಕು ಎಂಬ ನಿಯಮ ಜಾರಿಯಾಗಿದ್ದರಿಂದ ಖಾಸಗಿ ಕಾಲೇಜಿನ ಅರೆಕಾಲಿಕ ಉಪನ್ಯಾಸಕಿ ರಾಜೀನಾಮೆ ಕೊಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ನಗರದ ಪುಟ್ಟಸ್ವಾಮಯ್ಯನ ಪಾಳ್ಯದ ಜೈನ್ ಪಿಯು ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಚಾಂದಿನಿ ನಯಾಜ್ ರಾಜೀನಾಮೆ ಕೊಟ್ಟವರು. ಕಳೆದ ಮೂರು ವರ್ಷಗಳಿಂದ ಜೈನ್ ಕಾಲೇಜು, ವಿದ್ಯಾವಾಹಿನಿ ಕಾಲೇಜು ಸೇರಿದಂತೆ ಹಲವು ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು.
ಹಿಜಬ್ ವಿವಾದದಿಂದಾಗಿ ತಮ್ಮ ಧರ್ಮಕ್ಕೆ ಹೆಚ್ಚು ಅಧ್ಯತೆ ಕೊಟ್ಟು, ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಇವರು ಮಾತ್ರವಲ್ಲ ಕಾಲೇಜಿನ ವಿದ್ಯಾರ್ಥಿನಿಯರು ಧರ್ಮವೇ ಮುಖ್ಯ ಎಂದು ಕಾಲೇಜನ್ನೆ ಬಿಟ್ಟು ಹೋಗುತ್ತಿದ್ದಾರೆ. ಆದರೆ ನ್ಯಾಯಾಲಯವು ಮಕ್ಕಳಲ್ಲಿ ಒಂದೇ ರೀತಿ ನಿಯಮವಿರಬೇಕು ಎಂದು ಈ ನಿರ್ಧಾರ ಮಾಡಿದ್ದು, ಇದಕ್ಕೆ ಪರ-ವಿರೋಧ ಕೇಳಿಬರುತ್ತಿದೆ.