Breaking News

ತಿಂಗಳಿಗೆ ₹ 63,000 ಸಂಬಳ, SSLC ಪಾಸಾದವರಿಗೆ ನೌಕಾದಳದಲ್ಲಿ ಉದ್ಯೋಗ

Spread the love

indian Navy Recruitment 2022: ಭಾರತೀಯ ನೌಕಾದಳ(Indian Navy)ದಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1531 ಟ್ರೇಡ್ಸ್​​ಮ್ಯಾನ್​ ಗ್ರೂಪ್​ ಸಿ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

ಫೆಬ್ರವರಿ 19ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್​​​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​​ 5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್​ಸೈಟ್ www.indiannavy.nic.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆ ಭಾರತೀಯ ನೌಕಾದಳ
ಹುದ್ದೆಯ ಹೆಸರು ಟ್ರೇಡ್ಸ್​​ಮ್ಯಾನ್​ ಗ್ರೂಪ್​ ಸಿ
ಒಟ್ಟು ಹುದ್ದೆಗಳು 1531
ವಿದ್ಯಾರ್ಹತೆ 10ನೇ ತರಗತಿ
ಉದ್ಯೋಗದ ಸ್ಥಳ ಭಾರತದಲ್ಲಿ ಎಲ್ಲಿ ಬೇಕಾದರೂ
ವೇತನ ಮಾಸಿಕ ₹ 19,900-63,200
ಅರ್ಜಿ ಸಲ್ಲಿಕೆ ವಿಧಾನ ಆನ್​ ​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 19/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05/03/2022

ವಿದ್ಯಾರ್ಹತೆ:
ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ಟ್ರೇಡ್ಸ್​​ಮ್ಯಾನ್​ ಗ್ರೂಪ್​ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.

ವಯೋಮಿತಿ:
ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ಟ್ರೇಡ್ಸ್​​ಮ್ಯಾನ್​ ಗ್ರೂಪ್​ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-25 ವರ್ಷದೊಳಗಿರಬೇಕು.

ಉದ್ಯೋಗದ ಸ್ಥಳ:
ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ಟ್ರೇಡ್ಸ್​​ಮ್ಯಾನ್​ ಗ್ರೂಪ್​ ಸಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.

ವೇತನ:
ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ಟ್ರೇಡ್ಸ್​​ಮ್ಯಾನ್​ ಗ್ರೂಪ್​ ಸಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 19,900-63,200 ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/03/2022


Spread the love

About Laxminews 24x7

Check Also

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನ ವಿರೋಧಿಸಿ ಮತ್ತೆರಡು ಪಿಐಎಲ್ ಸಲ್ಲಿಕೆ

Spread the loveನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ