ಹಟ್ಟಿ ಚಿನ್ನದ ಗಣಿ ಕಂಪನಿ ವ್ಯಾಪ್ತಿಯ ಊಟಿ ಗೋಲ್ಡ್ ಮೈನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕನ ಮೇಲೆ ಕಲ್ಲು ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಯಚೂರು: ಹಟ್ಟಿ ಚಿನ್ನದ ಗಣಿ ಕಂಪನಿ ವ್ಯಾಪ್ತಿಯ ಊಟಿ ಗೋಲ್ಡ್ ಮೈನ್ಸ್‌ನಲ್ಲಿ ನಿನ್ನೆ ರಾತ್ರಿ ಮೇಲ್ಭಾಗದ ಕಲ್ಲು ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದೇ ವೇಳೆ, ಇಬ್ಬರು ಗಾಯಗೊಂಡಿದ್ದಾರೆ.
ಮೃತಪಟ್ಟ ಕಾರ್ಮಿಕನನ್ನು ಯಲ್ಲಪ್ಪ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಪಾಳೆಯದ ಕಾರ್ಮಿಕರು 700ರಿಂದ 800 ಅಡಿ ಆಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಸಮಯದಲ್ಲಿ ಮೇಲ್ಭಾಗದ ಕಲ್ಲು ಸಡಿಲಗೊಂಡು ಕಾರ್ಮಿಕರ ಮೇಲೆಯೇ ಉರುಳಿದೆ.
ಇದನ್ನೂ ಓದಿ: ಈಶ್ವರಪ್ಪ ವಜಾಗೊಳಿಸಲು ಕಾಂಗ್ರೆಸ್ ಅಹೋರಾತ್ರಿ ಧರಣಿ: ಶಕ್ತಿಸೌಧ ಆವರಣದಲ್ಲೇ ವಾಕಿಂಗ್, ದಿನ ಪತ್ರಿಕೆ ಓದು
ಗಾಯಾಳುಗಳನ್ನು ಹಟ್ಟಿ ಚಿನ್ನದ ಗಣಿ ಕಂಪನಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
Laxmi News 24×7