Breaking News

ಹೆಣ್ಣುಮಕ್ಕಳ ಶಿಕ್ಷಣದ ಕುರಿತು ಬಿಜೆಪಿ ನಿಲುವೇನು: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

Spread the love

ಬೆಂಗಳೂರು: ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಹೊರಡಿಸಿರುವ ಸುತ್ತೋಲೆಯನ್ನು ಸರ್ಕಾರ ಹಿಂಪಡೆಯಬೇಕು ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಹಾಗೆಯೇ, ಹೆಣ್ಣು ಮಕ್ಕಳ ಶಿಕ್ಷಣದ ವಿಚಾರದಲ್ಲಿ ಬಿಜೆಪಿಯ ನಿಲುವು ಏನು ಎಂಬುದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ತಿಳಿಸಬೇಕು ಎಂದು ಕೇಳಿದ್ದಾರೆ.

ಸುತ್ತೋಲೆಗೆ ಸಂಬಂಧಿಸಿದಂತೆ #HijabCircular ಟ್ಯಾಗ್ ಬಳಸಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ, ‘ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆದು, ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ’ ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಗ್ರಾಮ ಪಂಚಾಯತ್ ನಿರ್ಲಕ್ಷ್ಯಕ್ಕೆ ಬೇಸತ್ತ ಜನ; ಕಚೇರಿ ಮುಂದೆ ಕಸ ಸುರಿದು ಪ್ರತಿಭಟನೆ

Spread the loveಗದಗ: ಮೂಲ ಸೌಲಭ್ಯಗಳ ಕೊರತೆಯಿಂದ ಬೇಸತ್ತ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿ ಎದುರೇ ಚರಂಡಿಯ ಕಸ ಸುರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ