Breaking News

ಆಗ ನಾನು ಸಿಎಂ ಅಲ್ಲ, ಕ್ಲರ್ಕ್‌ ಆಗಿದ್ದೆ: H.D.K.

Spread the love

ಬೆಂಗಳೂರು: ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ನಾನು ಹತ್ತು ವರ್ಷಗಳ ಅವಧಿಯಲ್ಲಿ ನಡೆದ ಭ್ರಷ್ಟಾಚಾರ, ಹಗರಣಗಳ ಬಗ್ಗೆ ಸದನದಲ್ಲಿ ದಾಖಲೆಗಳನ್ನು ಇಡಲು ತಯಾರಿ ಮಾಡಿಕೊಂಡಿದ್ದೆ. ಆದರೆ, ಸದನ ಸರಿಯಾಗಿ ನಡೆಯಲೇ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ನೀವು ಕೂಡ 14 ತಿಂಗಳು ಆಡಳಿತ ಮಾಡಿದ್ದೀರಿ.

ಆಗ ಭ್ರಷ್ಟಾಚಾರ ಸರಿ ಮಾಡಬಹುದಿತ್ತಲ್ಲ ಎಂದು ಯಾರಾದರೂ ಕೇಳಬಹುದು. ಆದರೆ, ನಾನು ಆಗ ಸಿಎಂ ಅಲ್ಲ, ಎಫ್‌ಡಿಸಿ (ಪ್ರಥಮ ದರ್ಜೆ ಗುಮಾಸ್ತ) ಕೆಲಸ ಮಾಡಿದ್ದೆ ಅಷ್ಟೆ ಎಂದು ಸುದ್ದಿಗೋಷ್ಠಿಯಲ್ಲಿ ಬೇಸರ ಹೊರ ಹಾಕಿದರು.

ರಾಷ್ಟ್ರಧ್ವಜದ ವಿಷಯದಲ್ಲಿ ನಾನು ಸಚಿವ ಈಶ್ವರಪ್ಪ ಪರ ವಕೀಲಿಕೆ ಮಾಡುತ್ತಿಲ್ಲ. ನಾನು ಇರುವ ವಿಷಯವನ್ನು ಇದ್ದ ಹಾಗೆ ಹೇಳಿದ್ದೇನೆ. ಈಶ್ವರಪ್ಪ ಅವರು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಸಹಜವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅವರೇನೂ ಧ್ವಜಕ್ಕೆ ಅಪಮಾನ ಆಗುವಂತಹ ಹೇಳಿಕೆ ಕೊಟ್ಟಿಲ್ಲ. ಹಾಗಂತ ನಾನೇನೂ ಈಶ್ವರಪ್ಪ ಪರ ವಕೀಲಿಕೆ ಮಾಡುತ್ತಿಲ್ಲ ಎಂದರು.

ಸುಖಾ ಸುಮ್ಮನೆ ಸದನದ ಕಲಾಪ ವ್ಯರ್ಥ ಮಾಡದೇ ಹೈಕೋರ್ಟ್‌ನಲ್ಲಿ ಪಿಐಎಲ್ ಹಾಕಿ ಹೋರಾಟ ಮಾಡಲಿ ಎಂದು ಕಾಂಗ್ರೆಸ್‌ಗೆ ಟಾಂಗ್ ಕೊಟ್ಟರು. ಕಲಾಪಕ್ಕೆ ಅಡ್ಡಿ ಮಾಡುವವರನ್ನು ಸದನದಿಂದ ಅಮಾನತು ಮಾಡಿ. ಆ ನಂತರ ಸದನ ನಡೆಸಿ ಎಂದು ಸಭಾಧ್ಯಕ್ಷರಿಗೂ ಮನವಿ ಮಾಡುತ್ತೇನೆ. ಕೋವಿಡ್ ಅನಾಹುತ ಸಂದರ್ಭದಲ್ಲಿ ಆಗುತ್ತಿರುವ ಮತ್ತೊಂದು ‘ರಾಜಕೀಯ ಕೋವಿಡ್ ದುರಂತ ‘ ಇದು ಎಂದು ಟೀಕಿಸಿದರು.


Spread the love

About Laxminews 24x7

Check Also

ಸರ್ಕಾರಕ್ಕೆ 4,416 ಕೋಟಿ ರೂ. ಅಬಕಾರಿ ರಾಜಸ್ವ ಸಂಗ್ರಹ: ಕಳ್ಳಭಟ್ಟಿ ಮುಕ್ತ ಕಲಬುರಗಿ ಜಿಲ್ಲೆಗೆ ಪಣ, ಗಡಿಯಲ್ಲಿ ಕಟ್ಟೆಚ್ಚರ

Spread the loveಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಕಳ್ಳಭಟ್ಟಿ ಮತ್ತು ಕಲಬೆರೆಕೆ ಸೇಂದಿ ಹಾಗೂ ಮಾದಕ ವಸ್ತುಗಳ (ಗಾಂಜಾ ಮತ್ತು ಇತರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ