Breaking News

ಸ್ಟೇಷನ್‍ನಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ – ಹೊತ್ತಿ ಉರಿದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್

Spread the love

ಪಾಟ್ನಾ: ಬಿಹಾರದ ಮಧುಬನಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಗೊಂಡಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಪೂರ್ವ ಕೇಂದ್ರ ರೈಲ್ವೆ (ಇಸಿಆರ್) ತಿಳಿಸಿದೆ.

ಪೂರ್ವ ಕೇಂದ್ರ ರೈಲ್ವೆ ಪ್ರಕಾರ ಇಂದು ಬೆಳಗ್ಗೆ 9.13ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, 9.50ಕ್ಕೆ ಬೆಂಕಿ ನಂದಿಸಲಾಗಿದೆ. ಜಯನಗರದಿಂದ ನವದೆಹಲಿಗೆ ತೆರಳುವ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್‍ನಲ್ಲಿ ಈ ಘಟನೆ ಸಂಭವಿಸಿದೆ.

 

ಈ ಮುನ್ನ ಐದು ಬೋಗಿಗಳಿಗೆ ಬೆಂಕಿ ತಗುಲಿದೆ ಎಂದು ವರದಿಯಾಗಿತ್ತು. ಆದರೆ ರೈಲಿನ ಒಂದು ಬೋಗಿಗೆ ಮಾತ್ರ ಬೆಂಕಿ ಹೊತ್ತಿಕೊಂಡಿದೆ ಮತ್ತು ಈ ಘಟನೆಯಲ್ಲಿ ಯಾವುದೇ ವ್ಯಕ್ತಿಗೆ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ ಎಂದು ಇಸಿಆರ್ ಮಾಹಿತಿ ನೀಡಿದೆ.

 


Spread the love

About Laxminews 24x7

Check Also

ಸಿಎಂ ಬದಲಾವಣೆ ವಿಚಾರ: ಈ ವಿಚಾರವಾಗಿ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖರ್ಗೆ ಆದೇಶವಿದೆ: ಮಧು ಬಂಗಾರಪ್ಪ

Spread the loveಗದಗ: “ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಈ ಹೊತ್ತಿನಲ್ಲಿ, ಈ ಬಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ