ಹುಬ್ಬಳ್ಳಿ: ಬಿಜೆಪಿ ಪ್ಲ್ಯಾನ್‍ಗೆ ಜೆಡಿಎಸ್‍ನ ಮತ್ತೊಂದು ವಿಕೆಟ್ ಪತನವಾಗುತ್ತಾ? ಹಿರಿಯ ರಾಜಕಾರಣಿಯನ್ನು ತರಲು ಬಿಜೆಪಿ ಕಸರತ್ತು ನಡೆಸಿದೆಯಾ ಎನ್ನುವ ಪ್ರಶ್ನೆಗಳು ಸದ್ಯ ಕುತೂಹಲಕ್ಕೆ ಕಾರಣವಾಗಿದೆ.
ಪರಿಷತ್ ಸಭಾಪತಿ, ಜೆಡಿಎಸ್ ಹಿರಿಯ ನಾಯಕ ಬಸವರಾಜ ಹೊರಟ್ಟಿಯವರನ್ನು ಬಿಜೆಪಿಗೆ ಕರೆತರಲು ತರೆಮರೆಯಲ್ಲಿ ಬಿಜೆಪಿ ನಾಯಕರು ಕಸರತ್ತು ನಡೆಸಿರುವ ಬಗ್ಗೆ ಅನುಮಾನ ಮೂಡುತ್ತಿದೆ. ಖುದ್ದು ಕೇಂದ್ರ ಸಚಿವರು ಹೊರಟ್ಟಿ ಬಿಜೆಪಿ ಸೇರುವ ಬಗ್ಗೆ ಸುಳಿವು ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಈ ಬಗ್ಗೆ ಸುಳಿವು ಬಿಟ್ಟು ಕೊಟ್ಟಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈಗಾಗಲೇ ಪರಿಷತ್ ಚುನಾವಣೆಗೆ ರಾಜ್ಯದಿಂದ ಇಬ್ಬರ ಹೆಸರನ್ನು ದೆಹಲಿಗೆ ಕಳುಹಿಸಿದ್ದೇವೆ. ಅದರಲ್ಲಿ ಹೊರಟ್ಟಿ ಹೆಸರು ಇದ್ದರೂ ಇರಬಹುದು ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.