Breaking News

ಸಿನಿಮಾದಲ್ಲಿ ನಟಿಸಿದ ಬಿಎಸ್​ ಯಡಿಯೂರಪ್ಪ;

Spread the love

ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ನಡುವೆ ಮೊದಲಿನಿಂದಲೂ ನಂಟು ಇದೆ. ಚಿತ್ರರಂಗದಲ್ಲಿ ಮಿಂಚಿದ ಹಲವರು ರಾಜಕೀಯಕ್ಕೆ ಕಾಲಿಟ್ಟು ಸಾಧನೆ ಮಾಡಿದ್ದಾರೆ. ಅದೇ ರೀತಿ, ರಾಜಕೀಯದಲ್ಲಿ ಸಾಧನೆ ಮಾಡಿದ ಅನೇಕರು ನಂತರ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ಉದಾಹರಣೆ ಇದೆ. ಈಗಿನದ್ದು ಬಿ.ಎಸ್. ಯಡಿಯೂರಪ್ಪ (BS Yediyurappa) ಅವರ ಸರದಿ. ಹೌದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕನ್ನಡದ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಆ ಚಿತ್ರಕ್ಕೆ ‘ತನುಜಾ’ (Tanuja Kannada movie) ಎಂದು ಶೀರ್ಷಿಕೆ ಇಡಲಾಗಿದೆ. ಇದರ ಚಿತ್ರೀಕರಣ ಕೂಡ ಆರಂಭ ಆಗಿದ್ದು, ಶೂಟಿಂಗ್​ನಲ್ಲಿ ಬಿಎಸ್​ವೈ ಭಾಗಿಯಾಗಿರುವ ಫೋಟೋಗಳು ಲಭ್ಯವಾಗಿವೆ. ಅಷ್ಟಕ್ಕೂ ಮಾಜಿ ಮುಖ್ಯಮಂತ್ರಿಗೆ ಈ ಸಿನಿಮಾದಲ್ಲಿ ನಟಿಸಬೇಕು ಎನಿಸಿದ್ದು ಯಾಕೆ? ಅದಕ್ಕೊಂದು ಮುಖ್ಯ ಕಾರಣವಿದೆ. ಇದು ರಿಯಲ್​ ಲೈಫ್​ ಘಟನೆ ಆಧರಿಸಿದ ಸಿನಿಮಾ. ಕೊವಿಡ್​ ಸಂದರ್ಭದಲ್ಲಿ ನೀಟ್​ ಪರೀಕ್ಷೆ ಬರೆಯಲು ಸುಮಾರು 350ಕಿಮೀ ದೂರ ಪ್ರಯಾಣ ಮಾಡಿ ಗಮನ ಸೆಳೆದಿದ್ದ ಹುಡುಗಿಯ ಕಥೆ ರೋಚಕತೆಯಿಂದ ಕೂಡಿದೆ. ಆ ಘಟನೆ ಎಲ್ಲರ ಗಮನ ಸೆಳೆದಿತ್ತು. ಇದನ್ನೇ ಒನ್​ಲೈನ್ ಸ್ಟೋರಿ ಆಗಿಸಿಕೊಂಡು ನಿರ್ದೇಶಕ ಹರೀಶ್ ಎಂ.ಡಿ ಹಳ್ಳಿಯವರು ಈ ಚಿತ್ರವನ್ನು (BS Yediyurappa Film) ನಿರ್ದೇಶಿಸುತ್ತಿದ್ದಾರೆ. ಅದರಲ್ಲಿ ಬಿ.ಎಸ್.​ ಯಡಿಯೂರಪ್ಪ ನಟಿಸುತ್ತಿರುವುದು ವಿಶೇಷ.

ತನುಜಾ ಎಂಬ ಹುಡುಗಿ ಕೊರೊನಾ ಕಾರಣದಿಂದ ನೀಟ್ ಪರೀಕ್ಷೆ ಬರೆಯಲಾಗದೆ ತನ್ನ ಅಸಹಾಯಕತೆಯನ್ನು ತೋಡಿಕೊಂಡಿದ್ದ ಸಂದರ್ಭದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಕಾರದಿಂದ ಪರೀಕ್ಷೆ ಬರೆದು ನೀಟ್ ಪಾಸಾಗಿದ್ದು ಸುದ್ದಿ ಆಗಿತ್ತು. ಆ ಘಟನೆ ನಡೆದಾಗ ಬಿ.ಎಸ್​. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಗಳಾಗಿದ್ದರು. ಈಗ ಸಿನಿಮಾದಲ್ಲಿ ಕೂಡ ಅವರು ಮುಖ್ಯಮಂತ್ರಿಯ ಪಾತ್ರ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ