Breaking News

ಬೊಮ್ಮಾಯಿ ಏನು ವೇದಾಂತಿಯಾ? ಸಿದ್ದರಾಮಯ್ಯ ಕಿಡಿ

Spread the love

ಬೆಂಗಳೂರು: ಬೊಮ್ಮಾಯಿ ಏನು ವೇದಾಂತಿಯಾ? ಬೊಮ್ಮಾಯಿ ಹೇಳುವುದನ್ನು ಕೇಳಬೇಕಾ, ನಾನು? ಬೊಮ್ಮಾಯಿಗಿಂತ ಹಿರಿಯವ ನಾನು, ಬಿಜೆಪಿಯವರ ಮನಸ್ಥಿತಿ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವಿಪಕ್ಷವಾಗಿರಲು ನೈತಿಕತೆ ಇಲ್ಲ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಷ್ಟ್ರಧ್ವಜಕ್ಕೆ ಅವಮಾನ ಆದರೂ ಸುಮ್ಮನೆ ಕೂರಬೇಕಾ?

ಇದರ ಬಗ್ಗೆ ಕೇಳಿದರೆ ಜವಾಬ್ದಾರಿ ಇಲ್ಲ ಅಂತಾರೆ. ರಾಷ್ಟ್ರಧ್ವಜ ಕ್ಕೆ ಅಗೌರವ ಮಾಡೋದು ದೇಶ ಭಕ್ತಿನಾ? ಅಂಥವರು ಸಚಿವರಾಗಿ ಇರಬೇಕಾ? ಬಿಜೆಪಿ ಯಾವತ್ತೂ ರಾಷ್ಟ್ರಧ್ವಜದಿಂದ ಸ್ಪೂರ್ತಿ ಪಡೆದವರಲ್ಲ. ಅವರಿಗೆ ತ್ರಿವರ್ಣ ಧ್ವಜದ ಮಹತ್ವ ಗೊತ್ತಿಲ್ಲ. ಅವರಿಂದ ನಾವು ದೇಶಭಕ್ತಿ ಬಗ್ಗೆ ಕಲಿಯುವ ಅಗತ್ಯವಿಲ್ಲಎಂದು ಕಿಡಿಕಾರಿದರು.

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷದವರು ಅವರಿಂದ ಕಲಿಯಬೇಕಾ? ನಮ್ಮ ಹೋರಾಟ ಮುಂದುವರೆಯಲಿದೆ. ಇದಾದ ಮೇಲೆ ನಾವು ಜನರ ಬಳಿ‌ ಹೋಗುತ್ತೇವೆ. ಅವರು ಸಂವಿಧಾನಕ್ಕೆ ವಿರುದ್ದ ಇರುವವರು ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿ ಬಾಲ್ಯ ವಿವಾಹ ಕಡಿವಾಣಕ್ಕೆ ಕಠಿಣ ಮಸೂದೆ: ಬಾಲ್ಯ ವಿವಾಹಕ್ಕೆ ಪ್ರಯತ್ನ, ನಿಶ್ಚಿತಾರ್ಥವೂ ಅಪರಾಧ; ಏನೆಲ್ಲಾ ಶಿಕ್ಷೆ, ದಂಡ?

Spread the loveಬೆಂಗಳೂರು: ರಾಜ್ಯದಲ್ಲಿ ಬಾಲ್ಯ ವಿವಾಹದ ಪ್ರಮಾಣ ವರ್ಷಂಪ್ರತಿ ಹೆಚ್ಚುತ್ತಲೇ ಇದೆ.‌ ಅಧಿಕಾರಿಗಳು ಎಷ್ಟೇ ಜಾಗೃತಿ ಮೂಡಿಸಿದರೂ ಬಾಲ್ಯ ವಿವಾಹಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ