Breaking News

ಕಿಸಾನ್ ಡ್ರೋನ್ ವ್ಯವಸ್ಥೆಯಿಂದ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಸಂಸದ ಈರಣ್ಣ ಕಡಾಡಿ

Spread the love

ಬೆಂಗಳೂರು: ಕಿಸಾನ್ ಡ್ರೋನ್‍ಗಳು ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಮೊದಲ ಹೆಜ್ಜೆಯಾಗಿದೆ. ಹೊಸ ಉದ್ಯೋಗ ಸೃಷ್ಠಿಸುವ ಜೊತೆಗೆ ವಿದ್ಯಾವಂತ ಯುವ ಕೃಷಿಕರಿಗೆ ಹೊಸ ಅವಕಾಶಗಳನ್ನು ನಿರ್ಮಿಸುತ್ತದೆ. ಇದರಿಂದಾಗಿ ರೈತರಿಗೆ ಸಾಕಷ್ಟು ಸಮಯ ಉಳಿತಾಯವಾಗಲಿದೆ.

ಕಾರ್ಮಿಕರ ಸಮಸ್ಯೆ ಎದುರಿಸುತ್ತಿರುವ ಕೃಷಿ ಕ್ಷೇತ್ರಕ್ಕೆ ಇದು ವರದಾನವಾಗಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.

ಫೆಬ್ರುವರಿ 1 ರಂದು ಕೇಂದ್ರ ಸರ್ಕಾರದ ಬಜೆಟ್‍ನಲ್ಲಿ ಘೋಷಣೆಯಾಗಿದ್ದ, ಕಿಸಾನ್ ಡ್ರೋನ್ ಯೋಜನೆಯನ್ನು ಕೇವಲ 18 ದಿನಗಳಲ್ಲಿ ಜಾರಿಗೆ ಬರುವಂತೆ ಮಾಡಿದ ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದ ರೈತರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಕೃಷಿ ಮಾರುಕಟ್ಟೆಗಳಿಗೆ ಕೃಷಿ ಉತ್ಪನ್ನಗಳನ್ನು ಸಾಗಿಸಲು ತುಂಬಾ ಸಹಕಾರಿಯಾಗಲಿದೆ. ಕೀಟನಾಶಕ, ಔಷಧ, ಪೋಷಕಾಂಶಗಳ ಸಿಂಪಡಣೆ, ಬೆಳೆ ಆರೋಗ್ಯ ತಪಾಸಣೆ, ಭೂ ದಾಖಲೆಗಳ ಡಿಜಿಟಲೀಕರಣ, ಜಮೀನುಗಳ ಸರ್ವೆ ಈ ಎಲ್ಲ ಕಾರ್ಯಗಳಿಗೆ ಕಿಸಾನ್ ಡ್ರೋನ್ ಯೋಜನೆ ಅನುಕೂಲವಾಗಲಿದೆ ಎಂದು ಹೇಳಿದರು.


Spread the love

About Laxminews 24x7

Check Also

ಸಿಎಂ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದವರೇ ವಿಶ್ವಾಸ ಕಳೆದುಕೊಂಡಿದ್ದಾರೆ: ಬಿ ವೈ ವಿಜಯೇಂದ್ರ

Spread the loveಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದ ಶಾಸಕರುಗಳೇ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ