ಹಾವೇರಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್ ಆಗಿ ಕಟಾವಿಗೆ ಬಂದಿದ್ದ ಮೆಕ್ಕೆಜೋಳ ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೊಸಶಿಡೇನೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಪರಮೇಶಪ್ಪ ನಂದೀಹಳ್ಳಿ ಎಂಬವರಿಗೆ ಸೇರಿದ್ದ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಪರಮೇಶಪ್ಪ ಅವರು ತಮ್ಮ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದು, ಸುಮಾರು ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ಮೆಕ್ಕೆಜೋಳ ಸುಟ್ಟು ಕರಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯವನ್ನ ಮಾಡಿದ್ದಾರೆ. ರೈತನಿಗೆ ಸೂಕ್ತ ಪರಿಹಾರವನ್ನ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.
Laxmi News 24×7