ಹೊಸಪೇಟೆ: ಕೊಪ್ಪಳ ಜಿಲ್ಲೆಯ ಅಂಜನಾದ್ರಿಯೇ ಹನುಮ ಹುಟ್ಟಿದ ಸ್ಥಳ. ಶೀಘ್ರವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಮುಜರಾಯಿ ಮತ್ತು ವಕ್ಫ್ ಸಚಿವೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಮುಜರಾಯಿ ಇಲಾಖೆಯಿಂದ ದಾಖಲೆ, ಪುರಾವೆ ಸಂಗ್ರಹಿಸಲಾಗುತ್ತಿದೆ.
ರಾಮಾಯಣದಲ್ಲಿ ಇಲ್ಲಿನ ಕಿಷ್ಕಿಂಧೆ ಬಗ್ಗೆ ಉಲ್ಲೇಖವಿದೆ. ಆದರೆ, ತಿರುಪತಿಯಲ್ಲಿ ಹನುಮನ ಜನ್ಮಸ್ಥಳವಿದೆ ಎನ್ನಲು ಐತಿಹಾಸಿಕ ಪುರಾವಿಯಿಲ್ಲ ಎಂದು ಭಾನುವಾರ ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಅಯೋಧ್ಯೆಯ ಶ್ರೀರಾಮ ಮಂದಿರ ಮಾದರಿಯಲ್ಲಿ ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಮಾಡಲಾಗುವುದು. ಬಜೆಟ್‌ನಲ್ಲಿ ಈ ಬಗ್ಗೆ ಹೆಚ್ಚಿನ ಹಣ ಮೀಸಲಿರಿಸಲು ಪ್ರಯತ್ನ ನಡೆದಿದೆ. ಅಂಜನಾದ್ರಿ ಅಭಿವೃದ್ಧಿ ಕುರಿತು ಕೊಪ್ಪಳ ಡಿಸಿಯಿಂದ ಪ್ರಪೋಸಲ್ ಪಡೆಯಲಾಗಿದೆ. ಕೊಪ್ಪಳ ಉಸ್ತುವಾರಿ ಸಚಿವ ಆನಂದ ಸಿಂಗ್ ಆಗಿದ್ದರಿಂದ ಅಭಿವೃದ್ಧಿ ಪಕ್ಕಾ ಆಗಲಿದೆ ಎಂದರು.