ಬೆಂಗಳೂರು: ಹಿಂದೂ ಕಾರ್ಯಕರ್ತನ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಪ್ರಕರಣವನ್ನು ಶಿವಮೊಗ್ಗದಿಂದ ಸ್ಪ್ರೆಡ್ ಆಗೋಕೆ ಬಿಡಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಹರ್ಷ ಕೊಲೆ ಪ್ರಕರಣ ನಡೆದಿದೆ. ಹರ್ಷನ ಅಂತಿಮ ವಿದಿವಿಧಾನ ನೆರವೇರುತ್ತಿದೆ. ಮೆರವಣಿಗೆ ವೇಳೆ ಸ್ವಲ್ಪ ಗಲಾಟೆ ನಡೆದಿದೆ. ಮುರುಗನ್ ಹಿರಿಯ ಅಧಿಕಾರಿ ಸ್ಥಳದಲ್ಲಿ ಇದ್ದಾರೆ. ಅರೆಸ್ಟ್ ಮಾಡಿರೋದನ್ನು ಇನ್ನು ಮಾಹಿತಿ ಸದ್ಯ ಕಸ್ಟಡಿ ತೆಗೆದುಕೊಂಡಿದ್ದಾರೆ ಎಂದರು.
