Breaking News

ಆರೋಗ್ಯವೇ ಭಾಗ್ಯವಾಗಿದ್ದು, ಯುವಕರು ಆರೋಗ್ಯದ ಕಡೆ ಗಮನ ಹರಿಸಬೇಕು.:ಸತೀಶ್‌ ಜಾರಕಿಹೊಳಿ

Spread the love

ಯಮಕನಮರಡಿ: ಆರೋಗ್ಯವೇ ಭಾಗ್ಯವಾಗಿದ್ದು, ಯುವಕರು ಆರೋಗ್ಯದ ಕಡೆ ಗಮನ ಹರಿಸಬೇಕು. ನಿಮಗೆ ಬೇಕಾದ ಎಲ್ಲಾ ರೀತಿಯ ವ್ಯಾಯಾಮ ಸಾಮಗ್ರಿ ನೀಡಲು ಬದ್ಧರಿದ್ದು, ಓದಿಗೂ ಆಸಕ್ತಿ ತೊರಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.

ಅಲದಾಳ ಗ್ರಾಮದಲ್ಲಿ ನಡೆದ ವ್ಯಾಯಾಮ ಶಾಲಾ ಉಪಕರಣಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಮತ ಕ್ಷೇತ್ರದಲ್ಲಿ ಶಾಲಾ ಕಟ್ಟಡಗಳನ್ನು ಅಚ್ಚುಕಟ್ಟಾಗಿ ನಿರ್ಮಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು.
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಮತಕ್ಷೇತ್ರದ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಲ್ಕು ಸಾವಿರ ಡೇಸ್ಕ್‌ ಸೇರಿದಂತೆ ಇನ್ನಿತರ ಪರಿಕರಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ನಿಂದ ಈಗಾಗಲೇ ವಿವಿಧ ಗ್ರಾಮಗಳಿಗೆ ಕುರ್ಚಿಗಳು, ಸೌಂಡ್‌ ಸಿಸ್ಟಮ್‌ ವಿತರಿಸಲಾಗಿದ್ದು, ಇನ್ನು ಅನೇಕ ಗ್ರಾಮಗಳಿಗೆ ವಿತರಿಸಬೇಕಿದ್ದು, ಆರು ತಿಂಗಳೊಳಗೆ ಮತಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಸೌಂಡ್‌ ಸಿಸ್ಟಮ್‌, ಕುರ್ಚಿಗಳನ್ನು ಬೇಡಿಕೆ ಅನುಗುಣವಾಗಿ ವಿತರಿಸುತ್ತೇವೆಂದು ಭರವಸೆ ನೀಡಿದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ