Breaking News

ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಗಳನ್ನ ತರಗತಿಗೆ ಕೂರಲು ಪ್ರಿನ್ಸಿಪಾಲ್‌ಗೆ ಸೂಚಿಸಿದ ಜಿಲ್ಲಾಧಿಕಾರಿ.

Spread the love

ಬೆಳಗಾವಿ : ಹಿಜಾಬ್ ಧರಿಸಿ ಪರೀಕ್ಷೆಗೆ ಆಗಮಿಸಿದ್ದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶ ನಿರಾಕರಿಸಿದ ಘಟನೆ ಬೆಳಗಾವಿಯ ಕೆಎಲ್ಇ ಸಂಸ್ಥೆಯ ಲಿಂಗರಾಜ್ ಕಾಲೇಜಿನಲ್ಲಿ ನಡೆದಿದೆ.

ಕಾಲೇಜು ಆಡಳಿತ ಮಂಡಳಿಯ ದಿಢೀರ್ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿದ್ಯಾರ್ಥಿನಿಯರು, ಪರೀಕ್ಷೆ ಬಹಿಷ್ಕರಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ ಡಿಸಿ ಎಂ.ಜಿ. ಹಿರೇಮಠ ಅವರನ್ನು ವಿದ್ಯಾರ್ಥಿನಿಯರು ಭೇಟಿಯಾದರು. ಪದವಿ ಕಾಲೇಜುಗಳಿಗೆ ಸಮವಸ್ತ್ರ ಕಡ್ಡಾಯವಿಲ್ಲ.

ಆದರೂ ತರಗತಿಗೆ ಅವಕಾಶ ನೀಡುತ್ತಿಲ್ಲ ಎಂದು ಅಳಲು ತೋಡಿಕೊಂಡರು.ತಕ್ಷಣವೇ ಜಿಲ್ಲಾಧಿಕಾರಿ ಎಂಜಿ ಹಿರೇಮಠ ಕಾಲೇಜು ಪ್ರಾಚಾರ್ಯರ ಜೊತೆಗೆ ಮಾತನಾಡಿ ತರಗತಿ ಪ್ರವೇಶಕ್ಕೆ ಅವಕಾಶ ನೀಡುವಂತೆ ಸೂಚಿಸಿದರು. ನಂತರ ಪ್ರತಿಭಟನೆ ‌ಹಿಂಪಡೆದ ವಿದ್ಯಾರ್ಥಿನಿಯರು, ತರಗತಿಗೆ ತೆರಳಿ ಪರೀಕ್ಷೆ ಬರೆದರು. ವಿದ್ಯಾರ್ಥಿನಿಯರಿಗೆ ಪಾಲಿಕೆಯ ಎಐಎಂಐಎಂ ಸದಸ್ಯ ಶಾಹಿದ್ ಪಠಾಣ್ ಸಾಥ್‌ ನೀಡಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ