Breaking News

KSRTCಯಲ್ಲಿ 7ನೇ ತರಗತಿ ಪಾಸಾದವರಿಗೆ ಬಂಪರ್ ಉದ್ಯೋಗ,

Spread the love

KSRTC Recruitment 2022: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಆಫೀಸ್ ಅಸಿಸ್ಟೆಂಟ್-Office Assistant (ಹಾರ್ಟಿಕಲ್ಚರ್​​) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್​ಲೈನ್​(Offline) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 4 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ksrtc.in ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)
ಹುದ್ದೆಯ ಹೆಸರು ಆಫೀಸ್ ಅಸಿಸ್ಟೆಂಟ್
ಒಟ್ಟು ಹುದ್ದೆಗಳು 01
ವಿದ್ಯಾರ್ಹತೆ 7ನೇ ತರಗತಿ ಪಾಸ್
ಉದ್ಯೋಗದ ಸ್ಥಳ ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ ಆಫ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 10/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04/03/2022

ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಆಫೀಸ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ 7ನೇ ತರಗತಿ ಪಾಸಾಗಿರಬೇಕು.

ವಯೋಮಿತಿ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಆಫೀಸ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಮಾರ್ಚ್​ 4, 2022ಕ್ಕೆ 18-40 ವರ್ಷದೊಳಗಿರಬೇಕು. ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಆಫೀಸ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್) ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 11,320-15,010 ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ- 200 ರೂ. ಅರ್ಜಿ ಶುಲ್ಕ
ಅರ್ಜಿ ಶುಲ್ಕ ಪಾವತಿ ವಿಧಾನ: ಡಿಮ್ಯಾಂಡ್​ ಡ್ರಾಫ್ಟ್​(ಡಿಡಿ)​

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್​​
ಭೌತಿಕ ಮಾನದಂಡಗಳು

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (ನೇಮಕಾತಿ)
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ
ಕೇಂದ್ರ ಕಚೇರಿ
ಬೆಂಗಳೂರು – 27

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/03/2022


Spread the love

About Laxminews 24x7

Check Also

ಬಿಡಿಸಿಸಿ ಬ್ಯಾಂಕಿನ‌ ಚುನಾವಣೆ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

Spread the loveಬೆಳಗಾವಿ- ಬಿಡಿಸಿಸಿ ಬ್ಯಾಂಕಿನ‌ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ