ಶಿವಮೊಗ್ಗ: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಫೆಬ್ರವರಿ 23 ರ ಮುಂಜಾನೆಯವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. ಶಿವಮೊಗ್ಗ ಎಸ್ಪಿ ಬಿ.ಎಂ. ಲಕ್ಷ್ಮೀಪ್ರಸಾದ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ನಗರದ ಸೀಗೆಹಟ್ಟಿ ನಿವಾಸಿ ಹರ್ಷ (24) ನ ಮೇಲೆ ಮಾರಕಾಸ್ತ್ರಗಳಿಂದ ಹತ್ಯೆಗೈದು ನಾಲ್ವರು ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರು. . ಹಲ್ಲೆ ನಡೆಯುತ್ತಿದ್ದಂತೆ ಎರಡು ಗುಂಪುಗಳ ನಡುವೆ ನಗರದಲ್ಲಿ ಕಲ್ಲು ತೂರಾಟ ನಡೆದಿದೆ. ಈ ವೇಳೆ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಫೆಬ್ರವರಿ 23 ರ ಮುಂಜಾನೆಯವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಶಾಲಾ ಕಾಲೇಜುಗಳಿಗೆ ಇಂದು ಡಿಸಿ ಡಾ. ಸೆಲ್ವಮಣಿ ರಜೆ ಘೋಷಿಸಿದ್ದಾರೆ.