ಬೆಂಗಳೂರು: ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಸಧ್ಯ ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ, ಆನಂತರದ ಬೆಳವಣಿಗೆಗಳು ಬಿಜೆಪಿ ವರಿಷ್ಠರ ಗಮನಕ್ಕೂ ಬಂದಿದ್ದು, ಇಂಡಿಯಾ ಟುಡೆಗೆ ನೀಡಿದ ಸಂದರ್ಶನದ ವೇಳೆ ಸಚಿವ ಈಶ್ವರಪ್ಪ ಅವರಿಗೆ ತರಾಟೆಗೆ ತೆಗೆದುಕೊಂಡಿರುವುದಾಗಿ ಜೆ.ಪಿ. ನಡ್ಡಾ ತಿಳಿಸಿದ್ದಾರೆ.