ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಶಾಸಕರು ವಿಧಾನಸೌಧದಿಂದ ರಾಜಭವನದ ವರೆಗೆ ಪಾದಯಾತ್ರೆ ನಡೆಸಿ ನಂತರ ಮನವಿ ಪತ್ರ ಸಲ್ಲಿಸಿದ್ದಾರೆ.
ರಾಜ್ಯಪಾಲರ ಭೇಟಿ ನಂತರ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಹಾಗೂ ಕಾಂಗ್ರೆಸ್ ಶಾಸಕರ ನಿಯೋಗ ರಾಜ್ಯಪಾಲರನ್ನ ಪಾದಯಾತ್ರೆ ಮೂಲಕ ಬಂದು ಭೇಟಿ ಮಾಡಿದೆವು. ಆ ವೇಳೆ, ಈಶ್ವರಪ್ಪ ವಿರುದ್ಧ ಅವರಿಗೆ ಮನವಿ ಪತ್ರ ಸಲ್ಲಿಸಿದ್ದೇವೆ. ಈಶ್ವರಪ್ಪ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೇವೆ ಎಂದು ಹೇಳಿಕೆ ನೀಡಿದ್ದರು, ಇದು ನಮ್ಮ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುವಂತಹ ವಿಚಾರ, ಅಕ್ಷ್ಮಮ್ಯ ಅಪರಾಧ ಎಂದು ತಿಳಿಸಿದರು.
ಯಾರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡ್ತಾರೋ ಅವರಿಗೆ ಶಿಕ್ಷೆ ಕೊಡಬೇಕೆಂದು ಕಾನೂನಿಲ್ಲದೆ. ದೇಶದ ಪ್ರತಿಯೊಬ್ಬ ಪ್ರಜೆಯು ಸಂವಿಧಾನವನ್ನ ಗೌರವಿಸಬೇಕೆಂದು ಹೇಳಿದೆ. ಅದನ್ನ ಗೌರವಿಸದೇ ಇದ್ದಲ್ಲಿ ಅಪರಾಧ. ಈಶ್ವರಪ್ಪ ಹಿರಿಯ ಮಂತ್ರಿ, ದುರುದ್ದೇಶದಿಂದ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ.