ಬೆಂಗಳೂರು: ಹಾಡ ಹಗಲಿನಲ್ಲೇ ಮನೆಗೆ ನುಗ್ಗಿ ಖದೀಮನೊಬ್ಬ ದರೋಡೆ ಮಾಡಿ ಎಸ್ಕೇಪ್ ಆಗಿರುವ ಘಟನೆ ಬ್ಯಾಟರಾಯನಪುರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮನೆ ಬಾಗಿಲ ಮುಂದಕ್ಕೆ ಮಾಡಿ ಅಂಗಡಿಗೆ ಹೋಗಿ ಬರುವಷ್ಟರಲ್ಲಿ ಖದೀಮನ ಕೈಚಳಕ ತೋರಿದ್ದು, ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ್ದ ಆರೋಪಿ ಕ್ಷಣಾರ್ಧದಲ್ಲಿ ಮನೆಯಲ್ಲಿದ್ದ 1.80 ಲಕ್ಷ ರೂಪಾಯಿ ಬೆಲೆಬಾಳುವ ಚಿನ್ನ-ಬೆಳ್ಳಿ ಹಾಗೂ ನಗದು ಕದ್ದು ಎಸ್ಕೇಪ್ ಹಾಕಿದ್ದಾನೆ. ಆರೋಪಿ ಮನೆಗೆ ನುಗ್ಗಿ ದರೋಡೆ ಮಾಡಿ ಎಸ್ಕೇಪ್ ಆಗಿರೋ ದೃಶ್ಯಗಳು ಸ್ಥಳದಲ್ಲಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಕುರಿತಂತೆ ಮನೆ ಮಾಲೀಕ ನೀಡಿದ ದೂರಿನ ಅನ್ವಯ ಬ್ಯಾಟರಾಯನಪುರ ಪೊಲೀಸ್ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.