ತುಮಕೂರು: ಜಿಲ್ಲೆಯ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಖಾಲಿ ಇರುವಂತ 19 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2021-22ನೇ ಸಾಲಿಗೆ ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ 19 ಗ್ರಂಥಾಲಯ ಮೇಲ್ವಿಚಾರಕರ ಸ್ಥಾನಗಳಿಗೆ ತಿಂಗಳಿಗೆ ರೂ.12 ಸಾವಿರ ಗೌರವ ಸಂಭಾವನೆ ಆಧಾರದ ಮೇಲೆ ಆಯ್ಕೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹ ಉದ್ಯೋಗಾಕಾಂಕ್ಷಿಗಳು ಆಯಾ ಗ್ರಾಮ ಪಂಚಾಯ್ತಿ ಕಾರ್ಯಾಲಯಗಳಿಗೆ ದಿನಾಂಕ 14-03-2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸುವಂತೆ ತಿಳಿಸಿದ್ದಾರೆ.
ಎಲ್ಲೆಲ್ಲಿ ಹುದ್ದೆಗಳು ಖಾಲಿ.?
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ tumkurzillapanchayat.gov.in ತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ. ಇಲ್ಲವೇ 0816-2278063 ಸಂಖ್ಯೆಗೆ ಸಂಪರ್ಕಿಸಿ ಪಡೆಯಬಹುದಾಗಿದೆ.