ಹಾವೇರಿ: ಉಕ್ರೇನ್ ಮತ್ತು ರಷ್ಯಾ ನಡುವೆ ಗುರುವಾರ ಬೆಳಗ್ಗೆಯಿಂದ ಯುದ್ಧ ಪ್ರಾರಂಭವಾಗಿದೆ. ಸದ್ಯ ಉಕ್ರೇನ್‍ನಲ್ಲಿ ನೆಲೆಸಿರುವ ಅನೇಕ ಭಾರತೀಯರು ಹಾಗೂ ಕನ್ನಡಿಗರಿಗೆ ಆತಂಕ ಹೆಚ್ಚಾಗಿದೆ. ಈ ನಡುವೆ ಹಾವೇರಿ ಜಿಲ್ಲೆಯ ಒಂಬತ್ತು ವಿದ್ಯಾರ್ಥಿಗಳು ಉಕ್ರೇನ್ ಸಿಲುಕಿಕೊಂಡಿದ್ದಾರೆ.
ಹೌದು, ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣವನ್ನು ಉಕ್ರೇನ್‍ನಲ್ಲಿ ಪಡೆಯುತ್ತಿದ್ದಾರೆ. ರಾಣೇಬೆನ್ನೂರು ತಾಲೂಕಿನ 8 ವಿದ್ಯಾರ್ಥಿಗಳು ಬ್ಯಾಡಗಿ ತಾಲೂಕಿನ ಓರ್ವ ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ವಾಸಿಸುತ್ತಿದ್ದಾರೆ. ವಿದ್ಯಾರ್ಥಿಗಳನ್ನು ಸುಮನ್ ವೈಶಾಯರ್, ರಂಜಿತ ಕಲಕಟ್ಟಿ, ಅಮಿತ್ ವೈಶಾಯರ್, ನವೀನ ಗ್ಯಾನಗೌಡರ, ಜೈನ್ ನತುಲ್, ವಸಂತಕುಮಾರ, ಶಿವಲಿಂಗಪ್ಪ ಮತ್ತು ಪ್ರವೀಣ್ ಅಜರೆಡ್ಡಿ ಹಾಗೂ ಮೈನಾ ಎಂದು ಗುರುತಿಸಲಾಗಿದೆ ಮತ್ತು ಎಲ್ಲರೂ ಕಾಕ್ರ್ಯೂ ಇಂಟರ್ ನ್ಯಾಶನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಇದೀಗ ಮಕ್ಕಳ ಜೊತೆ ವೀಡಿಯೋ ಕಾಲ್ ಮಾಡಿ ಪೋಷಕರು ಅಲ್ಲಿ ಪರಿಸ್ಥಿತಿ ಬಗ್ಗೆ ವಿಚಾರಿಸುತ್ತಿದ್ದಾರೆ. ಸರಿಯಾದ ಪ್ರಮಾಣದಲ್ಲಿ ನೀರು ಹಾಗೂ ಆಹಾರ ಸಿಗುತ್ತಿಲ್ಲ. ಎಲ್ಲ ಅಂಗಡಿ ಮಾಲ್ ತುಂಬಾ ಗದ್ದಲದಲ್ಲಿ ಕೂಡಿವೆ. ಯಾವಾಗ ಏನು ಆಗುತ್ತದೆಯೋ ಎಂಬ ಆತಂಕ ಕನ್ನಡಿಗರಲ್ಲಿ ಮೂಡಿದೆ.