ಶಿವಮೊಗ್ಗ : ಫೆ.26 ರಿಂದ ಶಿವಮೊಗ್ಗ ನಗರದಲ್ಲಿ ಶಾಲಾ-ಕಾಲೇಜು ( Schools and Colleges ) ಆರಂಭವಾಗಲಿದೆ ಎಂದು ಶಿವಮೊಗ್ಗ ( Shivamogga ) ಜಿಲ್ಲಾ ಎಸ್ ಪಿ ಬಿ. ಎಂ ಲಕ್ಷ್ಮೀ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ( Harsha Murder Case) ಹಿನ್ನೆಲೆ ಶಿವಮೊಗ್ಗದಲ್ಲಿ ಹಿಂದು ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ನಗರದಲ್ಲಿ ಭಾರೀ ಗಲಭೆಗೆ ಕಾರಣವಾಗಿತ್ತು. ಈ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ನಗರದಲ್ಲಿ ಗಲಭೆ ತಣ್ಣಗಾದ ಬಳಿಕ ಫೆ.26 ರಿಂದ ಶಿವಮೊಗ್ಗ ನಗರದಲ್ಲಿ ಶಾಲಾ-ಕಾಲೇಜು ಆರಂಭವಾಗಲಿದೆ ಎಂದು ಎಸ್ ಪಿ ಮಾಹಿತಿ ನೀಡಿದ್ದಾರೆ.
ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಮತ್ತಿಬ್ಬರು ಆರೋಪಿಗಳು ಅರೆಸ್ಟ್
ಇನ್ನೂ, ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ( Harsha Murder Case) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಪ್ರಕರಣ ಸಂಬಂಧ ಇದುವರೆಗೆ 8 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಬ್ಹುಲ್ ರೋಷನ್, ಜಾಫರ್ ಸಾಧಿಕ್ ಎಂದು ಗುರುತಿಸಲಾಗಿದೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗದಲ್ಲಿನ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ( Harsha Murder Case ) 8 ಆರೋಪಿಗಳನ್ನು ಬಂಧಿಸಲಾಗಿದ್ದು. . ಇಂದು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಈಗ ಹರ್ಷ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ.. ಪ್ರಕರಣ ಸಂಬಂಧ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ, ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಫೆ.26ರವರೆಗೆ ಮುಂದುವರೆಸಲಾಗಿದೆ.